ವಿಮೋಚನಕಾಂಡ 33:6

ಅದರಂತೆಯೇ ಇಸ್ರಾಯೇಲ್‌ ಮಕ್ಕಳು ಹೋರೆಬ್‌ ಬೆಟ್ಟದ ಬಳಿಯಲ್ಲಿ ತಮ್ಮ ಆಭರಣಗಳನ್ನು ತೆಗೆದುಬಿಟ್ಟರು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 33

4ಜನರು ಈ ಕಠಿಣವಾದ ಮಾತುಗಳನ್ನು ಕೇಳಿ ದುಃಖಪಟ್ಟರು. ಯಾರೂ ತಮ್ಮ ಆಭರಣಗಳನ್ನು ಹಾಕಿ ಕೊಳ್ಳಲಿಲ್ಲ.

5ಕರ್ತನು ಮೋಶೆಗೆ--ಇಸ್ರಾಯೇಲ್‌ ಮಕ್ಕಳಿಗೆ ಹೀಗೆ ಹೇಳು--ನೀವು ಬಗ್ಗದ ಕುತ್ತಿಗೆಯುಳ್ಳ ಜನರು, ನಾನು ಕ್ಷಣಮಾತ್ರದಲ್ಲಿ ನಿಮ್ಮೊಳಗೆ ಬಂದು ನಿಮ್ಮನ್ನು ನಿರ್ಮೂಲಮಾಡುವೆನು. ಹೀಗಿರುವದರಿಂದ ನಾನು ನಿಮಗೆ ಏನು ಮಾಡಬೇಕೋ ಅದನ್ನು ತಿಳುಕೊಳ್ಳು ವಂತೆ ನಿಮ್ಮ ಆಭರಣಗಳನ್ನು ಈಗ ನಿಮ್ಮಿಂದ ತೆಗೆದು ಬಿಡಿರಿ ಎಂದು ಹೇಳು ಅಂದನು.

6ಅದರಂತೆಯೇ ಇಸ್ರಾಯೇಲ್‌ ಮಕ್ಕಳು ಹೋರೆಬ್‌ ಬೆಟ್ಟದ ಬಳಿಯಲ್ಲಿ ತಮ್ಮ ಆಭರಣಗಳನ್ನು ತೆಗೆದುಬಿಟ್ಟರು.

7ಇದಲ್ಲದೆ ಮೋಶೆಯು ಗುಡಾರವನ್ನು ತೆಗೆದು ಪಾಳೆಯದ ಹೊರಗೆ ಪಾಳೆಯಕ್ಕೆ ದೂರವಾಗಿ ಹಾಕಿ ಅದಕ್ಕೆ ದೇವದರ್ಶನ ಗುಡಾರ ಎಂದು ಹೆಸರಿಟ್ಟನು. ತರುವಾಯ ಕರ್ತನನ್ನು ಹುಡುಕುವವರೆಲ್ಲಾ ಪಾಳೆಯದ ಹೊರಗೆ ಇರುವ ದೇವದರ್ಶನ ಗುಡಾರಕ್ಕೆ ಹೋದರು.

8ಇದಾದ ಮೇಲೆ ಮೋಶೆಯು ಹೊರಗೆ ಗುಡಾರದ ಬಳಿಗೆ ಹೋಗುವಾಗೆಲ್ಲಾ ಜನರೆಲ್ಲರು ಎದ್ದು ತಮ್ಮ ತಮ್ಮ ಗುಡಾರಗಳ ಬಾಗಿಲುಗಳಲ್ಲಿ ನಿಂತುಕೊಂಡು ಮೋಶೆಯು ಗುಡಾರದಲ್ಲಿ ಪ್ರವೇಶಿಸುವ ವರೆಗೆ ಅವನ ಹಿಂದೆ ನೋಡುತ್ತಿದ್ದರು.

ವಿಮೋಚನಕಾಂಡ 33 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी