ನೀನು ಹಿಂಸೆಗೊಳ ಗಾಗಿದ್ದೀ ಮತ್ತು ಕುಡಿದು ಅಮಲೇರಿದ್ದೀ. ಆದರೆ ದ್ರಾಕ್ಷಾರಸದಿಂದಲ್ಲ, ಆದದರಿಂದ ಈಗ ಇದನ್ನು ಕೇಳು,
19ಈ ಎರಡು ಸಂಗತಿ ಗಳು ನಿನಗೆ ಸಂಭವಿಸಿವೆ; ನಿನಗೋಸ್ಕರ ಚಿಂತಿಸು ವವರು ಯಾರಿದ್ದಾರೆ? ನಾಶನವೋ ಸಂಹಾರವೋ ಕ್ಷಾಮವೋ ಕತ್ತಿಯೋ ನಾನು ಯಾರಿಂದ ನಿನ್ನನ್ನು ಆಧರಿಸಲಿ?
20ನಿನ್ನ ಕುಮಾರರು ಮೂರ್ಛೆ ಹೋಗಿ, ಬಲೆಗೆ ಸಿಕ್ಕಿದ ಕಾಡು ಗೂಳಿಗಳಂತೆ ಎಲ್ಲಾ ಬೀದಿಗಳು ಕೂಡುವ ಚೌಕದಲ್ಲಿ ಅವರು ಬಿದ್ದಿದ್ದಾರೆ; ಅವರು ಕರ್ತನ ಉಗ್ರದಿಂದಲೂ ನಿನ್ನ ದೇವರ ಗದರಿಕೆ ಯಿಂದಲೂ ತುಂಬಿದ್ದಾರೆ.
21ನೀನು ಹಿಂಸೆಗೊಳ ಗಾಗಿದ್ದೀ ಮತ್ತು ಕುಡಿದು ಅಮಲೇರಿದ್ದೀ. ಆದರೆ ದ್ರಾಕ್ಷಾರಸದಿಂದಲ್ಲ, ಆದದರಿಂದ ಈಗ ಇದನ್ನು ಕೇಳು,
22ತನ್ನ ಜನರಿಗೋಸ್ಕರ ವಾದಿಸುವ ನಿನ್ನ ದೇವರೂ ನಿನ್ನ ಕರ್ತನಾಗಿರುವ ಕರ್ತನೂ ಹೀಗನ್ನು ತ್ತಾನೆ--ಇಗೋ, ನಾನು ನಿನ್ನ ಕೈಯೊಳಗಿಂದ ತತ್ತರಿಸು ವಂಥ ಪಾತ್ರೆಯನ್ನೂ ನನ್ನ ಉಗ್ರವಾದ ಪಾತ್ರೆಯ ಮಡ್ಡಿಯನ್ನೂ ತೆಗೆದುಹಾಕಿದ್ದೇನೆ; ಇನ್ನು ಮೇಲೆ ನೀನು ಅದನ್ನು ತಿರಿಗಿ ಕುಡಿಯುವದೇ ಇಲ್ಲ.
23ಆದರೆ ನಾವು ಹಾದುಹೋಗುವಂತೆ ಬಗ್ಗಿಕೋ ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ; ನೀನು ಹಾದುಹೋಗುವ ವರಿಗೆ ನಿನ್ನ ಶರೀರವನ್ನು ನೆಲದಂತೆಯೂ ಬೀದಿ ಯಂತೆಯೂ ಇಟ್ಟಿಯಲ್ಲಾ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ