ಯೆರೆಮಿಯ 26:11

ಆಗ ಯಾಜಕರೂ ಪ್ರವಾದಿ ಗಳೂ ಪ್ರಧಾನರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ --ಈ ಮನುಷ್ಯನು ಮರಣಕ್ಕೆ ತಕ್ಕವನು. ಯಾಕಂದರೆ ನಿಮ್ಮ ಕಿವಿಗಳಿಂದಲೇ ನೀವು ಕೇಳಿದ ಪ್ರಕಾರ ಅವನು ಈ ಪಟ್ಟಣಕ್ಕೆ ವಿರೋಧವಾಗಿ ಪ್ರವಾದಿಸಿದ್ದಾನೆ ಎಂಬದೇ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 26

9ಈ ಮನೆಯು ಶಿಲೋವಿನ ಹಾಗೆ ಆಗುವದೆಂದೂ ಈ ಪಟ್ಟಣವು ನಿವಾಸಿಗಳಿಲ್ಲದೆ ಹಾಳಾಗುವದೆಂದೂ ಕರ್ತನ ಹೆಸರಿನಲ್ಲಿ ಯಾಕೆ ನೀನು ಪ್ರವಾದಿಸಿದ್ದೀ ಅಂದರು. ಆಗ ಜನರೆಲ್ಲರೂ ಕರ್ತನ ಆಲಯದಲ್ಲಿ ಯೆರೆವಿಾಯನಿಗೆ ವಿರೋಧವಾಗಿ ಕೂಡಿಕೊಂಡರು.

10ಯೆಹೂದದ ಪ್ರಧಾನರು ಈ ಸಂಗತಿಗಳನ್ನು ಕೇಳಿ ಅರಸನ ಮನೆಯಿಂದ ಕರ್ತನ ಆಲಯಕ್ಕೆ ಬಂದು ಕರ್ತನ ಆಲಯದ ಹೊಸ ಬಾಗಲಿನ ಪ್ರವೇಶದಲ್ಲಿ ಕೂತುಕೊಂಡರು.

11ಆಗ ಯಾಜಕರೂ ಪ್ರವಾದಿ ಗಳೂ ಪ್ರಧಾನರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ --ಈ ಮನುಷ್ಯನು ಮರಣಕ್ಕೆ ತಕ್ಕವನು. ಯಾಕಂದರೆ ನಿಮ್ಮ ಕಿವಿಗಳಿಂದಲೇ ನೀವು ಕೇಳಿದ ಪ್ರಕಾರ ಅವನು ಈ ಪಟ್ಟಣಕ್ಕೆ ವಿರೋಧವಾಗಿ ಪ್ರವಾದಿಸಿದ್ದಾನೆ ಎಂಬದೇ.

12ಆಗ ಯೆರೆವಿಾಯನು ಪ್ರಧಾನರೆಲ್ಲ ರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ--ನೀವು ಕೇಳಿದ ವಾಕ್ಯಗಳನ್ನೆಲ್ಲಾ ಈ ಮನೆಗೆ ವಿರೋಧವಾ ಗಿಯೂ ಈ ಪಟ್ಟಣಕ್ಕೆ ವಿರೋಧವಾಗಿಯೂ ಪ್ರವಾದಿ ಸುವದಕ್ಕೆ ಕರ್ತನು ನನ್ನನ್ನು ಕಳುಹಿಸಿದ್ದಾನೆ.

13ಹೀಗಿ ರುವದರಿಂದ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನೂ ತಿದ್ದಿಕೊಳ್ಳಿರಿ; ನಿಮ್ಮ ದೇವರಾದ ಕರ್ತನ ಸ್ವರಕ್ಕೆ ವಿಧೇಯರಾಗಿರಿ; ಆಗ ಕರ್ತನು ನಿಮಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯಕ್ಕಾಗಿ ಪಶ್ಚಾತ್ತಾಪಪಡು ವನು.

ಯೆರೆಮಿಯ 26 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी