ಪ್ರಕಟನೆ 19:7

ಸಂತೋಷಪಡೋಣ, ಹರ್ಷಗೊಳ್ಳೋಣ, ಆತ ನನ್ನು ಘನಪಡಿಸೋಣ; ಯಾಕಂದರೆ ಕುರಿಮರಿಯಾದಾ ತನ ವಿವಾಹವು ಬಂತು; ಆತನಿಗೆ ವಿವಾಹವಾಗುವ ಕನ್ಯೆಯು ತನ್ನನ್ನು ಸಿದ್ಧಮಾಡಿಕೊಂಡಿದ್ದಾಳೆ ಎಂದು ಹೇಳಿತು.

ಸಂದರ್ಭದೊಂದಿಗೆ ಓದಿ · ಪ್ರಕಟನೆ 19

5ಆಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಶಬ್ದವು--ದೇವರ ಸೇವಕರೆಲ್ಲರೇ, ಆತನಿಗೆ ಭಯ ಪಡುವ ಹಿರಿಕಿರಿಯರೇ, ನಮ್ಮ ದೇವರನ್ನು ಕೊಂಡಾಡಿರಿ ಎಂದು ಹೇಳಿತು.

6ತರುವಾಯ ಜನರ ದೊಡ್ಡ ಗುಂಪಿನ ಶಬ್ದದಂತೆಯೂ ಬಹಳ ನೀರುಗಳ ಘೋಷದಂತೆಯೂ ಗಟ್ಟಿಯಾದ ಗುಡುಗುಗಳ ಶಬ್ದದಂತೆಯೂ ಇದ್ದ ಒಂದು ಶಬ್ದವನ್ನು ನಾನು ಕೇಳಿದೆನು; ಅದು--ಹಲ್ಲೆಲೂಯಾ, ಸರ್ವಶಕ್ತನಾಗಿರುವ ದೇವರಾದ ಕರ್ತನು ಆಳುತ್ತಾನೆ.

7ಸಂತೋಷಪಡೋಣ, ಹರ್ಷಗೊಳ್ಳೋಣ, ಆತ ನನ್ನು ಘನಪಡಿಸೋಣ; ಯಾಕಂದರೆ ಕುರಿಮರಿಯಾದಾ ತನ ವಿವಾಹವು ಬಂತು; ಆತನಿಗೆ ವಿವಾಹವಾಗುವ ಕನ್ಯೆಯು ತನ್ನನ್ನು ಸಿದ್ಧಮಾಡಿಕೊಂಡಿದ್ದಾಳೆ ಎಂದು ಹೇಳಿತು.

8ನಿರ್ಮಲವಾದ ಬಿಳೀ ನಯವಾದ ನಾರು ಮಡಿಯನ್ನು ಧರಿಸಿಕೊಳ್ಳುವದಕ್ಕೆ ಆಕೆಗೆ ಅನುಗ್ರಹಿ ಸೋಣವಾಗಿತ್ತು; ಯಾಕಂದರೆ ಆ ನಾರುಮಡಿಯು ಪರಿಶುದ್ಧರ ನೀತಿಯೇ.

9ಇದಲ್ಲದೆ ಅವನು--ಕುರಿಮರಿ ಯಾದಾತನ ವಿವಾಹದ ಔತಣಕ್ಕೆ ಕರೆಯಲ್ಪಟ್ಟವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿದನು. ಇದಲ್ಲದೆ ಅವನು--ಇವುಗಳು ದೇವರ ನಿಜವಾದ ಮಾತುಗಳಾಗಿವೆ ಎಂದು ನನಗೆ ಹೇಳಿದನು.

ಪ್ರಕಟನೆ 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी