೧ ಅರಸುಗಳು 7:38

ಹತ್ತು ತಾಮ್ರದ ತೊಟ್ಟಿಗಳನ್ನು ಮಾಡಿದನು. ಒಂದೊಂದು ತೊಟ್ಟಿಯು ನಾಲ್ವತ್ತು ಕೊಳಗ ಹಿಡಿಯಿತು; ಒಂದೊಂದು ತೊಟ್ಟಿಯು ನಾಲ್ಕು ಮೊಳವು; ಆ ಹತ್ತು ಆಧಾರ ಗಳಲ್ಲಿಯೂ ಒಂದೊಂದರ ಮೇಲೆ ಒಂದೊಂದು ತೊಟ್ಟಿಯನ್ನು ಇಟ್ಟನು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 7

36ಅದರದರ ಪ್ರಮಾಣದ ಪ್ರಕಾರ ಹಲಿಗೆಗಳ ಕೈಹಿಡಿಗಳ ಮೇಲೆಯೂ ಅಂಚು ಗಳ ಮೇಲೆಯೂ ಕೆರೂಬಿಗಳನ್ನೂ ಸಿಂಹಗಳನ್ನೂ ಖರ್ಜೂರ ಗಿಡಗಳನ್ನೂ ಚಿತ್ರಿಸಿದನು; ಸುತ್ತಲೂ ಅದ ರದರ ಪ್ರಮಾಣದ ಪ್ರಕಾರ ಚಿತ್ರಿಸಿದನು.

37ಈ ಪ್ರಕಾರ ಆ ಹತ್ತು ಆಧಾರಗಳನ್ನು ಮಾಡಿದನು. ಅವು ಗಳಿಗೆಲ್ಲಾ ಒಂದೇ ಎರಕವೂ ಒಂದೇ ಅಳತೆಯೂ ಒಂದೇ ಪ್ರಮಾಣವೂ ಆಗಿದ್ದವು.

38ಹತ್ತು ತಾಮ್ರದ ತೊಟ್ಟಿಗಳನ್ನು ಮಾಡಿದನು. ಒಂದೊಂದು ತೊಟ್ಟಿಯು ನಾಲ್ವತ್ತು ಕೊಳಗ ಹಿಡಿಯಿತು; ಒಂದೊಂದು ತೊಟ್ಟಿಯು ನಾಲ್ಕು ಮೊಳವು; ಆ ಹತ್ತು ಆಧಾರ ಗಳಲ್ಲಿಯೂ ಒಂದೊಂದರ ಮೇಲೆ ಒಂದೊಂದು ತೊಟ್ಟಿಯನ್ನು ಇಟ್ಟನು.

39ಮನೆಯ ಬಲ ಪಾರ್ಶ್ವದಲ್ಲಿ ಐದು ಆಧಾರಗಳನ್ನೂ ಮನೆಯ ಎಡಪಾರ್ಶ್ವದಲ್ಲಿ ಐದು ಆಧಾರಗಳನ್ನೂ ಇಟ್ಟನು. ಆದರೆ ಸಮುದ್ರವನ್ನು ಮನೆಯ ಪೂರ್ವ ಭಾಗದ ಬಲಪಾರ್ಶ್ವದಲ್ಲಿ ದಕ್ಷಿಣಕ್ಕೆ ದುರಾಗಿ ಇಟ್ಟನು.

40ಹೀಗೆಯೇ ಹೀರಾಮನು ತೊಟ್ಟಿ ಗಳನ್ನೂ ಸಲಿಕೆಗಳನ್ನೂ ಪಾತ್ರೆಗಳನ್ನೂ ಮಾಡಿದನು. ಹೀರಾಮನು ಕರ್ತನ ಮನೆಗೋಸ್ಕರ ಅರಸನಾದ ಸೊಲೊಮೋನನು ಮಾಡಿಸಿದ ಎಲ್ಲಾ ಕೆಲಸಗಳನ್ನು ಮಾಡಿ ತೀರಿಸಿದನು.

೧ ಅರಸುಗಳು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी