ದಾನಿಯೇಲನು 2:46

ಆಗ ಅರಸನಾದ ನೆಬೂಕದ್ನೆ ಚ್ಚರನು ಅಡ್ಡಬಿದ್ದು ದಾನಿಯೇಲನಿಗೆ ನಮಸ್ಕರಿಸಿರಿ, ಅವನಿಗೆ ಕಾಣಿಕೆಗಳನ್ನೂ ಸುಗಂಧದ್ರವ್ಯ ಅರ್ಪಿಸಬೇ ಕೆಂದೂ ಆಜ್ಞಾಪಿಸಿದನು.

ಸಂದರ್ಭದೊಂದಿಗೆ ಓದಿ · ದಾನಿಯೇಲನು 2

44ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.

45ಆ, ಕಲ್ಲು ಕೈಗಳ ಸಹಾಯವಿಲ್ಲದೆ ಬೆಟ್ಟದೊಳಗಿಂದ ಒಡೆಯಲ್ಪಟ್ಟು ಕಬ್ಬಿಣವನ್ನೂ ಹಿತ್ತಾಳೆಯನ್ನೂ ಮಣ್ಣನ್ನೂ ಬೆಳ್ಳಿಯನ್ನೂ ಬಂಗಾರವನ್ನೂ ಧ್ವಂಸ ಮಾಡಿತೆಂದು ನೀನು ನೋಡಿದ್ದು ಇದೇ. ಮಹಾದೇವರು ಇನ್ನು ಮೇಲೆ ಸಂಭವಿಸುವಂಥದ್ದನ್ನು ಅರಸನಿಗೆ ತಿಳಿಯಪಡಿಸಿ ದ್ದಾನೆ; ಕನಸು ನಿಶ್ಚಯವಾಗಿದೆ; ಅದರ ಅರ್ಥಗಳೂ ಸತ್ಯವಾಗಿವೆ ಅಂದನು.

46ಆಗ ಅರಸನಾದ ನೆಬೂಕದ್ನೆ ಚ್ಚರನು ಅಡ್ಡಬಿದ್ದು ದಾನಿಯೇಲನಿಗೆ ನಮಸ್ಕರಿಸಿರಿ, ಅವನಿಗೆ ಕಾಣಿಕೆಗಳನ್ನೂ ಸುಗಂಧದ್ರವ್ಯ ಅರ್ಪಿಸಬೇ ಕೆಂದೂ ಆಜ್ಞಾಪಿಸಿದನು.

47ಅರಸನು ದಾನಿಯೇಲನಿಗೆ ಉತ್ತರವಾಗಿ--ನೀನು ಈ ರಹಸ್ಯವನ್ನು ಪ್ರಕಟ ಮಾಡಲು ಸಮರ್ಥನಾದದರಿಂದ ನಿಶ್ಚಯವಾಗಿ ನಿಮ್ಮ ದೇವರು ದೇವರುಗಳಿಗೆ ದೇವರಾಗಿಯೂ ಅರಸುಗಳ ಕರ್ತನಾಗಿಯೂ ರಹಸ್ಯಗಳನ್ನು ಪ್ರಕಟಮಾಡುವಾತ ನಾಗಿಯೂ ಆಗಿದ್ದಾನೆ ಅಂದನು.

48ಆಗ ಅರಸನು ದಾನಿಯೇಲನನ್ನು ಒಬ್ಬ ಮಹಾ ವ್ಯಕ್ತಿಯನ್ನಾಗಿ ಮಾಡಿ ಅವನಿಗೆ ಅನೇಕ ದೊಡ್ಡ ಬಹುಮಾನಗಳನ್ನು ಕೊಟ್ಟು ಸಮಸ್ತ ಬಾಬೆಲಿನ ಪ್ರಾಂತ್ಯಗಳಿಗೆ ಅಧಿಕಾರಿಯನ್ನಾ ಗಿಯೂ ಬಾಬೆಲಿನ ಸಮಸ್ತ ಜ್ಞಾನಿಗಳಿಗೆ ಮುಖ್ಯಾಧಿ ಪತಿಯನ್ನಾಗಿಯೂ ನೇಮಿಸಿದನು.

ದಾನಿಯೇಲನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी