ಪ್ರವಾದಿಯಿಂದ ಕರ್ತನು ಇಸ್ರಾಯೇಲನ್ನು ಐಗುಪ್ತದೊಳಗಿಂದ ಬರಮಾಡಿ ಆ ಪ್ರವಾದಿ ಯಿಂದಲೇ ಆತನು ಅವನನ್ನು ಕಾಪಾಡಿದನು.
11ಗಿಲ್ಯಾದಿನಲ್ಲಿ ದುಷ್ಟತನ ಇದೆಯೋ? ನಿಶ್ಚಯವಾಗಿ ಅವೆಲ್ಲಾ ವ್ಯರ್ಥವೇ; ಅವರು ಗಿಲ್ಗಾಲಿನಲ್ಲಿ ಹೋರಿಗಳನ್ನು ಅರ್ಪಿಸುತ್ತಾರೆ, ಹೌದು, ಅವರ ಬಲಿಪೀಠಗಳು ಹೊಲದ ಸಾಲುಗಳಲ್ಲಿರುವ ಕಲ್ಲುಕುಪ್ಪೆಯ ಹಾಗಿದೆ ಎಂದು ಹೇಳಿದನು.
12ಯಾಕೋಬನು ಸಿರಿಯಾ ದೇಶಕ್ಕೆ ಓಡಿಹೋದನು; ಇಸ್ರಾಯೇಲನು ಹೆಂಡತಿಯ ನಿಮಿತ್ತ ಸೇವೆಮಾಡಿ ಹೆಂಡತಿಯ ನಿಮಿತ್ತ ಕುರಿಗಳನ್ನು ಕಾದನು.
13ಪ್ರವಾದಿಯಿಂದ ಕರ್ತನು ಇಸ್ರಾಯೇಲನ್ನು ಐಗುಪ್ತದೊಳಗಿಂದ ಬರಮಾಡಿ ಆ ಪ್ರವಾದಿ ಯಿಂದಲೇ ಆತನು ಅವನನ್ನು ಕಾಪಾಡಿದನು.
14ಆದ ರೂ ಎಫ್ರಾಯಾಮು ಬಹು ಕಠೋರವಾಗಿ ಆತನನ್ನು ರೇಗಿಸಿತು. ಆದದರಿಂದ ಆತನು ಅದರ ರಕ್ತವನ್ನು ಅದರ ಮೇಲೆ ಬರಮಾಡುವನು; ಅವನ ನಿಂದೆಯನ್ನು ಅವನ ಕರ್ತನು ಅವನ ಮೇಲೆ ಬರಮಾಡುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ