ಆಮೋಸ 9:2

ಅವರು ನರಕದ ವರೆಗೂ ತೋಡಿ ಕೊಂಡು ಹೋದರೂ ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವದು. ಅವರು ಆಕಾಶಕ್ಕೆ ಏರಿ ಹೋದರೂ ನಾನು ಅವರನ್ನು ಅಲ್ಲಿಂದ ಕೆಳಗೆ ಇಳಿಸುವೆನು.

ಸಂದರ್ಭದೊಂದಿಗೆ ಓದಿ · ಆಮೋಸ 9

1ಕರ್ತನು ಯಜ್ಞವೇದಿಯ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನು ಹೇಳಿದ್ದೇ ನಂದರೆ--ಹೊಸ್ತಿಲುಗಳು ಕದಲುವಂತೆ ಆಧಾರ ಬೋದಿಗೆಗಳನ್ನು ಬಲವಾಗಿ ಹೊಡೆದು ಅವು ಎಲ್ಲರ ತಲೆಗಳ ಮೇಲೆ ಬೀಳುವ ಹಾಗೆ ಅವುಗಳನ್ನು ಕಡಿದು ಬಿಡು; ಅವರಲ್ಲಿ ಉಳಿದವರನ್ನು ನಾನು ಕೊಲ್ಲುವೆನು; ಅವರಲ್ಲಿ ಓಡಿ ಹೋಗುವವನು ಓಡಿಹೋಗಲಾಗು ವದಿಲ್ಲ; ಅವರಲ್ಲಿ ತಪ್ಪಿಸಿಕೊಳ್ಳುವವನು ತಪ್ಪಿಸಿಕೊಳ್ಳ ಲಾಗುವದಿಲ್ಲ.

2ಅವರು ನರಕದ ವರೆಗೂ ತೋಡಿ ಕೊಂಡು ಹೋದರೂ ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವದು. ಅವರು ಆಕಾಶಕ್ಕೆ ಏರಿ ಹೋದರೂ ನಾನು ಅವರನ್ನು ಅಲ್ಲಿಂದ ಕೆಳಗೆ ಇಳಿಸುವೆನು.

3ಅವರು ಕರ್ಮೆಲಿನ ಬೆಟ್ಟದ ಕೊನೆಯಲ್ಲಿ ಅಡಗಿಕೊಂಡರೂ ನಾನು ಅವರನ್ನು ಹುಡುಕಿ ಅಲ್ಲಿಂದ ತೆಗೆಯುವೆನು; ಅವರು ನನ್ನ ಕಣ್ಣುಗಳಿಗೆ ಮರೆಯಾಗಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ ಸರ್ಪಕ್ಕೆ ಅಪ್ಪಣೆಕೊಟ್ಟು ಅದು ಅವರನ್ನು ಅಲ್ಲೇ ಕಚ್ಚುವಂತೆ ಮಾಡುವೆನು.

4ಅವರು ತಮ್ಮ ಶತ್ರುಗಳ ಮುಂದೆ ಸೆರೆಗೆ ಹೋದರೂ ಅಲ್ಲಿಯೂ ನಾನು ಕತ್ತಿಗೆ ಅಪ್ಪಣೆ ಕೊಡುವೆನು; ಅದು ಅವರನ್ನು ಕೊಲ್ಲುವದು. ಮೇಲಿಗಾಗಿ ಅಲ್ಲ, ಕೇಡಿಗಾಗಿ ಅವರ ಮೇಲೆ ನನ್ನ ದೃಷ್ಟಿಯಿಡುವೆನು.

ಆಮೋಸ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी