ವಿಮೋಚನಕಾಂಡ 20:22

ಕರ್ತನು ಮೋಶೆಗೆ--ನೀನು ಇಸ್ರಾಯೇಲ್‌ ಮಕ್ಕಳಿಗೆ ಹೀಗೆ ಹೇಳಬೇಕು--ನಾನು ಆಕಾಶದಿಂದ ನಿಮ್ಮ ಸಂಗಡ ಮಾತನಾಡಿದ್ದನ್ನು ನೀವು ನೋಡಿದ್ದೀರಿ.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 20

20ಆಗ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ, ನಿಮ್ಮನ್ನು ಪರೀಕ್ಷಿಸುವದಕ್ಕೂ ನೀವು ಪಾಪ ಮಾಡದಂತೆ ಆತನ ಭಯವು ನಿಮಗಿರುವದಕ್ಕೂ ದೇವರು ಬಂದಿದ್ದಾನೆ ಅಂದನು.

21ಆಗ ಜನರು ದೂರದಲ್ಲಿ ನಿಂತರು. ಮೋಶೆಯು ದೇವರಿದ್ದ ಕಾರ್ಗತ್ತಲೆಯ ಹತ್ತಿರ ಬಂದನು.

22ಕರ್ತನು ಮೋಶೆಗೆ--ನೀನು ಇಸ್ರಾಯೇಲ್‌ ಮಕ್ಕಳಿಗೆ ಹೀಗೆ ಹೇಳಬೇಕು--ನಾನು ಆಕಾಶದಿಂದ ನಿಮ್ಮ ಸಂಗಡ ಮಾತನಾಡಿದ್ದನ್ನು ನೀವು ನೋಡಿದ್ದೀರಿ.

23ನನ್ನ ಹೊರತಾಗಿ ಬೆಳ್ಳಿ ಬಂಗಾರದ ದೇವರುಗಳನ್ನೂ ನೀವು ಮಾಡಿಕೊಳ್ಳಬಾರದು.

24ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡ ಬೇಕು. ಅದರ ಮೇಲೆ ನಿನ್ನ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಗಳನ್ನೂ ಎತ್ತುಗಳನ್ನೂ ಅರ್ಪಿಸಬೇಕು; ನನ್ನ ಹೆಸರನ್ನು ಜ್ಞಾಪಕಮಾಡುವ ಎಲ್ಲಾ ಸ್ಥಳಗಳಲ್ಲಿ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.

ವಿಮೋಚನಕಾಂಡ 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी