ಗಲಾತ್ಯದವರಿಗೆ 3:16

ದೇವರು ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳನ್ನು ಮಾಡಿದನು; ಆತನು--ನಿನ್ನ ಸಂತತಿಗಳಿಗೆ ಎಂದು ಹೇಳಿ ಅನೇಕರನ್ನು ಸೂಚಿಸದೆ--ನಿನ್ನ ಸಂತತಿಗೆ ಎಂದು ಹೇಳಿ ಒಬ್ಬನನ್ನೇ ಸೂಚಿಸುತ್ತಾನೆ. ಆ ಒಬ್ಬಾತನು ಕ್ರಿಸ್ತನೇ.

ಸಂದರ್ಭದೊಂದಿಗೆ ಓದಿ · ಗಲಾತ್ಯದವರಿಗೆ 3

14ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಯೇಸು ಕ್ರಿಸ್ತನ ಮೂಲಕ ಆನ್ಯಜನರಿಗೆ ಉಂಟಾಗು ವಂತೆ ದೇವರು ವಾಗ್ದಾನ ಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತಾಯಿತು.

15ಸಹೊದರರೇ, ಮನುಷ್ಯ ರೀತಿಯಲ್ಲಿ ನಾನು ಮಾತನಾಡುತ್ತೇನೆ. ಸ್ಥಿರಪಡಿಸಿದ ಒಂದು ಒಡಂಬಡಿಕೆ ಯು ಕೇವಲ ಮನುಷ್ಯನದಾಗಿದ್ದರೂ ಅದನ್ನು ಯಾರೂ ರದ್ದು ಮಾಡುವದಿಲ್ಲ ಇಲ್ಲವೆ ಅದಕ್ಕೆ ಹೆಚ್ಚೇನೂ ಕೂಡಿಸುವದಿಲ್ಲ.

16ದೇವರು ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳನ್ನು ಮಾಡಿದನು; ಆತನು--ನಿನ್ನ ಸಂತತಿಗಳಿಗೆ ಎಂದು ಹೇಳಿ ಅನೇಕರನ್ನು ಸೂಚಿಸದೆ--ನಿನ್ನ ಸಂತತಿಗೆ ಎಂದು ಹೇಳಿ ಒಬ್ಬನನ್ನೇ ಸೂಚಿಸುತ್ತಾನೆ. ಆ ಒಬ್ಬಾತನು ಕ್ರಿಸ್ತನೇ.

17ನಾನು ಹೇಳುವದೇನಂದರೆ, ದೇವರು ಕ್ರಿಸ್ತನಲ್ಲಿ ಮೊದಲು ಸ್ಥಿರಪಡಿಸಿದ ಒಡಂಬಡಿಕೆಯನ್ನು ನಾನೂರ ಮೂವತ್ತು ವರುಷಗಳ ಮೇಲೆ ಬಂದ ನ್ಯಾಯಪ್ರಮಾಣವು ರದ್ದು ಮಾಡಿ ಆ ವಾಗ್ದಾನವನ್ನು ವ್ಯರ್ಥಮಾಡುವದಿಲ್ಲ.

18ಆ ಬಾಧ್ಯತೆಯು ನ್ಯಾಯಪ್ರಮಾಣದಿಂದ ದೊರೆ ಯುವದಾದರೆ ಅದು ಇನ್ನು ವಾಗ್ದಾನದಿಂದ ದೊರೆಯು ವದಿಲ್ಲವೆಂದಾಯಿತು; ಆದರೆ ದೇವರು ಅದನ್ನು ಅಬ್ರಹಾಮನಿಗೆ ವಾಗ್ದಾನದ ಮೂಲಕವಾಗಿಯೇ ದಯಪಾಲಿಸಿದ್ದಾನೆ.

ಗಲಾತ್ಯದವರಿಗೆ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी