ಇಬ್ರಿಯರಿಗೆ 7:27

ಮೊದಲು ತನ್ನ ಸ್ವಂತ ಪಾಪಪರಿಹಾರಕ್ಕಾಗಿ ಆಮೇಲೆ ಜನರ ಪಾಪ ಪರಿಹಾರಕ್ಕಾಗಿ ಯಜ್ಞಾರ್ಪಣೆ ಮಾಡುವ ಮಹಾ ಯಾಜಕರಂತೆ ಈತನು ಪ್ರತಿನಿತ್ಯವೂ ಸಮರ್ಪಿಸ ಬೇಕಾದ ಅವಶ್ಯವಿಲ್ಲ. ಯಾಕಂದರೆ ಈತನು ತನ್ನನ್ನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.

ಸಂದರ್ಭದೊಂದಿಗೆ ಓದಿ · ಇಬ್ರಿಯರಿಗೆ 7

25ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ.

26ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.

27ಮೊದಲು ತನ್ನ ಸ್ವಂತ ಪಾಪಪರಿಹಾರಕ್ಕಾಗಿ ಆಮೇಲೆ ಜನರ ಪಾಪ ಪರಿಹಾರಕ್ಕಾಗಿ ಯಜ್ಞಾರ್ಪಣೆ ಮಾಡುವ ಮಹಾ ಯಾಜಕರಂತೆ ಈತನು ಪ್ರತಿನಿತ್ಯವೂ ಸಮರ್ಪಿಸ ಬೇಕಾದ ಅವಶ್ಯವಿಲ್ಲ. ಯಾಕಂದರೆ ಈತನು ತನ್ನನ್ನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.

28ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ.

ಇಬ್ರಿಯರಿಗೆ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी