ಯಾಜಕಕಾಂಡ 7:16

ಆದರೆ ಅವನ ಯಜ್ಞ ಸಮರ್ಪಣೆಯು ಒಂದು ಹರಕೆಯಾಗಿದ್ದರೆ ಇಲ್ಲವೆ ಸ್ವಇಚ್ಛೆಯಾದ ಸಮರ್ಪಣೆ ಯಾಗಿದ್ದರೆ ಅವನು ತನ್ನ ಯಜ್ಞವನ್ನು ಅರ್ಪಿಸಿದ ದಿನದಲ್ಲಿಯೇ ತಿನ್ನಬೇಕು; ಅದರಲ್ಲಿ ಉಳಿದದ್ದನ್ನು ಮಾರನೆಯ ದಿನದಲ್ಲಿ ಸಹ ತಿನ್ನಬೇಕು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 7

14ಅವನು ಇಡೀ ಕಾಣಿಕೆಯಲ್ಲಿ ಒಂದನ್ನು ಎತ್ತುವ ಕಾಣಿಕೆಯನ್ನಾಗಿ ಕರ್ತನಿಗೆ ಅರ್ಪಿಸಬೇಕು. ಅದು ಸಮಾಧಾನ ಬಲಿಗಳ ರಕ್ತವನ್ನು ಚಿಮುಕಿಸುವ ಯಾಜಕನದಾಗಬೇಕು.

15ಉಪಕಾರಸ್ತುತಿಗಾಗಿ ಅವನ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ಅರ್ಪಿ ಸಲ್ಪಟ್ಟ ದಿನವೇ ತಿನ್ನಬೇಕು; ಅವನು ಅದರಲ್ಲಿ ಬೆಳಗಿನ ವರೆಗೆ ಯಾವದನ್ನೂ ಉಳಿಸಬಾರದು.

16ಆದರೆ ಅವನ ಯಜ್ಞ ಸಮರ್ಪಣೆಯು ಒಂದು ಹರಕೆಯಾಗಿದ್ದರೆ ಇಲ್ಲವೆ ಸ್ವಇಚ್ಛೆಯಾದ ಸಮರ್ಪಣೆ ಯಾಗಿದ್ದರೆ ಅವನು ತನ್ನ ಯಜ್ಞವನ್ನು ಅರ್ಪಿಸಿದ ದಿನದಲ್ಲಿಯೇ ತಿನ್ನಬೇಕು; ಅದರಲ್ಲಿ ಉಳಿದದ್ದನ್ನು ಮಾರನೆಯ ದಿನದಲ್ಲಿ ಸಹ ತಿನ್ನಬೇಕು.

17ಉಳಿದಿರುವ ಯಜ್ಞದ ಮಾಂಸವನ್ನು ಮೂರನೆಯ ದಿನದಲ್ಲಿ ಬೆಂಕಿ ಯಿಂದ ಸುಡಬೇಕು.

18ತನ್ನ ಸಮಾಧಾನ ಬಲಿ ಯಜ್ಞದ ಮಾಂಸದಲ್ಲಿ ಯಾವ ಭಾಗವನ್ನಾದರೂ ಮೂರನೆಯ ದಿನದಲ್ಲಿ ತಿಂದರೆ ಅದು ಸಮರ್ಪಣೆಯಾಗುವದಿಲ್ಲ ಇಲ್ಲವೆ ಅರ್ಪಿಸುವವನ ಲೆಕ್ಕಕ್ಕೆ ಸೇರಿಸಲ್ಪಡುವದಿಲ್ಲ. ಅದು ಹೊಲೆಯಾಗಿರುವದು, ಅದನ್ನು ತಿನ್ನುವವನು ತನ್ನ ಅಪರಾಧವನ್ನು ಹೊರುವನು.

ಯಾಜಕಕಾಂಡ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी