ಆಗ ಅವನು ಆ ಜಂತನ್ನು ಬೆಂಕಿಯೊಳಕ್ಕೆ ಝಾಡಿಸಿಬಿಟ್ಟನು; ಯಾವ ಅಪಾಯವೂ ಅವನಿಗೆ ಆಗಲಿಲ್ಲ.
3ಪೌಲನು ಕಟ್ಟಿಗೆಯ ಹೊರೆಯನ್ನು ಕೂಡಿಸಿ ಬೆಂಕಿಯ ಮೇಲೆ ಹಾಕಿದಾಗ ಆ ಕಾವಿನ ದೆಸೆಯಿಂದ ಒಂದು ವಿಷ ಸರ್ಪವು ಹೊರಗೆ ಬಂದು ಅವನ ಕೈಯನ್ನು ಬಿಗಿಯಾಗಿ ಸುತ್ತಿಕೊಂಡಿತು.
4ಆ ವಿಷಜಂತು ಅವನ ಕೈಯಿಂದ ಜೋತಾಡುವದನ್ನು ಆ ಅನಾಗರಿಕರು ನೋಡಿ--ಈ ಮನುಷ್ಯನು ಸಮುದ್ರದಿಂದ ತಪ್ಪಿಸಿ ಕೊಂಡರೂ ಪ್ರತೀಕಾರವು ಇವನನ್ನು ಬದುಕಗೊಡಿಸು ವದಿಲ್ಲ. ಇವನು ನಿಸ್ಸಂದೇಹವಾಗಿ ಕೊಲೆ ಪಾತಕನು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.
5ಆಗ ಅವನು ಆ ಜಂತನ್ನು ಬೆಂಕಿಯೊಳಕ್ಕೆ ಝಾಡಿಸಿಬಿಟ್ಟನು; ಯಾವ ಅಪಾಯವೂ ಅವನಿಗೆ ಆಗಲಿಲ್ಲ.
6ಹೇಗಿದ್ದರೂ ಅವನು ಬಾತುಹೋದಾನು ಇಲ್ಲವೆ ಅಕಸ್ಮಾತ್ತಾಗಿ ಸತ್ತುಬಿದ್ದಾನು ಎಂದು ಅವರು ನೋಡಿಕೊಂಡೇ ಇದ್ದರು; ಬಹಳ ಹೊತ್ತಿನವರೆಗೂ ಅವರು ನೋಡಿದ ಮೇಲೆ ಯಾವ ಅಪಾಯವೂ ಅವನಿಗೆ ಬಾರದೆ ಇರುವದನ್ನು ಕಂಡು ಅವರು ತಮ್ಮ ಮನಸ್ಸುಗಳನ್ನು ಬದಲಾಯಿಸಿಕೊಂಡು ಅವನೊಬ್ಬ ದೇವರೆಂ
7ಅದೇ ಸ್ಥಳದಲ್ಲಿ ಪೊಪ್ಲಿಯ ಎಂಬ ಆ ದ್ವೀಪದ ಮುಖ್ಯಸ್ಥನಿಗೆ ಆಸ್ತಿ ಇತ್ತು; ಅವನು ನಮ್ಮನ್ನು ಸೇರಿಸಿಕೊಂಡು ಮೂರು ದಿವಸ ಆದರದಿಂದ ಸತ್ಕರಿಸಿ ದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ