ವಿಮೋಚನಕಾಂಡ 10:21

ಆಗ ಕರ್ತನು ಮೋಶೆಗೆ--ಐಗುಪ್ತದೇಶದಲ್ಲಿ ಕತ್ತಲೆ ಕವಿದು ಗಾಡಾಂಧಕಾರವಾಗುವಂತೆ ನಿನ್ನ ಕೈಯನ್ನು ಆಕಾಶದ ಕಡೆಗೆ ಚಾಚು ಅಂದನು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 10

19ಕರ್ತನು ಮಹಾಬಲವಾದ ಪಶ್ಚಿಮಗಾಳಿಯನ್ನು ಬೀಸಮಾಡಿದನು. ಅದು ಮಿಡತೆಗಳನ್ನು ಎತ್ತಿಕೊಂಡು ಹೋಗಿ ಕೆಂಪುಸಮುದ್ರದಲ್ಲಿ ಹಾಕಿತು. ಐಗುಪ್ತದ ಮೇರೆಗಳಲ್ಲೆಲ್ಲಾ ಒಂದು ಮಿಡತೆಯಾದರೂ ಉಳಿಯ ಲಿಲ್ಲ.

20ಆದರೆ ಕರ್ತನು ಫರೋಹನ ಹೃದಯವನ್ನು ಕಠಿಣಮಾಡಿದ್ದರಿಂದ ಅವನು ಇಸ್ರಾಯೇಲ್‌ ಮಕ್ಕಳನ್ನು ಕಳುಹಿಸದೆ ಹೋದನು.

21ಆಗ ಕರ್ತನು ಮೋಶೆಗೆ--ಐಗುಪ್ತದೇಶದಲ್ಲಿ ಕತ್ತಲೆ ಕವಿದು ಗಾಡಾಂಧಕಾರವಾಗುವಂತೆ ನಿನ್ನ ಕೈಯನ್ನು ಆಕಾಶದ ಕಡೆಗೆ ಚಾಚು ಅಂದನು.

22ಮೋಶೆಯು ಆಕಾಶದ ಕಡೆಗೆ ಕೈಚಾಚಿದಾಗ ಐಗುಪ್ತದೇಶದಲ್ಲೆಲ್ಲಾ ಮೂರು ದಿನಗಳ ವರೆಗೆ ಘೋರವಾದ ಕತ್ತಲು ಕವಿಯಿತು.

23ಮೂರು ದಿನಗಳ ವರೆಗೆ ಅವರು ಒಬ್ಬರನ್ನೊಬ್ಬರು ನೋಡಲಿಲ್ಲ, ಯಾರೂ ತಮ್ಮ ಸ್ಥಳ ವನ್ನು ಬಿಟ್ಟು ಏಳಲೂ ಇಲ್ಲ. ಆದರೆ ಇಸ್ರಾಯೇಲ್‌ ಮಕ್ಕಳಿಗೆಲ್ಲಾ ಅವರು ವಾಸಿಸುವ ಸ್ಥಳದಲ್ಲಿ ಅವರಿಗೆ ಬೆಳಕಿತ್ತು.

ವಿಮೋಚನಕಾಂಡ 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी