ಯೆಹೆಜ್ಕೇಲನು 20:19

ನಾನೇ ಕರ್ತನೂ ನಿಮ್ಮ ದೇವರೂ ಆಗಿದ್ದೇನೆ ನನ್ನ ನಿಯಮಗಳಲ್ಲಿಯೇ ನಡೆ ಯಿರಿ ನ್ಯಾಯಗಳನ್ನು ಕೈಕೊಂಡು ಅವುಗಳನ್ನೇ ಮಾಡಿರಿ;

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 20

17ಆದರೂ ಅವರನ್ನು ನಾನು ನಾಶಮಾಡದ ಹಾಗೆ ನನ್ನ ಕಣ್ಣು ಕನಿಕರಿಸಿತು; ನಾನು ಅವರನ್ನು ಅರಣ್ಯದಲ್ಲಿ ಸಂಪೂರ್ಣವಾಗಿ ಮುಗಿಸಿಬಿಡ ಲಿಲ್ಲ.

18ಆದರೆ ನಾನು ಅರಣ್ಯದಲ್ಲಿ ಅವರ ಮಕ್ಕಳಿಗೆ ಹೇಳಿದ್ದೇನಂದರೆ--ನಿಮ್ಮ ತಂದೆಗಳ ನಿಯಮಗಳಲ್ಲಿ ನಡೆಯಬೇಡಿರಿ, ಅವರ ನ್ಯಾಯಗಳನ್ನು ಅನುಸರಿಸ ಬೇಡಿರಿ, ಅವರ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರ ಮಾಡಿಕೊಳ್ಳಬೇಡಿರಿ;

19ನಾನೇ ಕರ್ತನೂ ನಿಮ್ಮ ದೇವರೂ ಆಗಿದ್ದೇನೆ ನನ್ನ ನಿಯಮಗಳಲ್ಲಿಯೇ ನಡೆ ಯಿರಿ ನ್ಯಾಯಗಳನ್ನು ಕೈಕೊಂಡು ಅವುಗಳನ್ನೇ ಮಾಡಿರಿ;

20ನನ್ನ ಸಬ್ಬತ್ತುಗಳನ್ನು ಪರಿಶುದ್ಧಮಾಡಿರಿ ನಾನೇ ನಿಮ್ಮ ದೇವರಾದ ಕರ್ತನು ಎಂದು ಅವು ನಿಮಗೂ ನನಗೂ ನೀವು ತಿಳಿಯುವ ಹಾಗೆ ಗುರುತುಗಳಾಗಿರುವವು.

21ಆದಾಗ್ಯೂ ಮಕ್ಕಳು ನನಗೆ ವಿರೋಧವಾಗಿ ತಿರುಗಿ ಬಿದ್ದರು; ಯಾವವುಗಳನ್ನು ಮನುಷ್ಯನು ಮಾಡಿದರೆ ಬದುಕುವನೋ ಆ ನನ್ನ ನಿಯಮಗಳಲ್ಲಿ ನಡೆಯಲಿಲ್ಲ ನನ್ನ ನ್ಯಾಯಗಳನ್ನು ಕೈಕೊಂಡುಮಾಡಲಿಲ್ಲ; ನನ್ನ ಸಬ್ಬತ್ತುಗಳನ್ನು ಅಪವಿತ್ರ ಪಡಿಸಿದಾಗ ಅವರ ಮೇಲೆ ನನ್ನ ರೋಷವನ್ನು ಸುರಿದುಬಿಡುವೆನೆಂದೂ ನನ್ನ ಕೋಪ ವನ್ನು ಅರಣ್ಯದಲ್ಲಿ ಅವರ ಮೇಲೆ ತೀರಿಸಿಬಿಡುವೆ ನೆಂದೂ ಹೇಳಿದೆನು.

ಯೆಹೆಜ್ಕೇಲನು 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी