೨ ಸಮುವೇಲನು 7:26

ಸೈನ್ಯಗಳ ಕರ್ತನು ಇಸ್ರಾಯೇಲಿನ ಮೇಲೆ ದೇವರಾಗಿದ್ದಾನೆಂದು ಸದಾಕಾಲಕ್ಕೂ ನಿನ್ನ ನಾಮವು ಘನಹೊಂದಲಿ. ಇದಲ್ಲದೆ ನಿನ್ನ ದಾಸನಾದ ದಾವೀ ದನ ಮನೆಯು ನಿನ್ನ ಮುಂದೆ ಸ್ಥಿರವಾಗಿರಲಿ.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 7

24ಇಸ್ರಾ ಯೇಲ್‌ ಜನವನ್ನು ಸದಾಕಾಲಕ್ಕೂ ನಿನ್ನ ಜನರಾಗಿ ರುವ ಹಾಗೆ ನಿನಗೆ ಸ್ಥಿರಪಡಿಸಿಕೊಂಡಿದ್ದೀ; ಕರ್ತ ನಾದ ನೀನು ಅವರಿಗೆ ದೇವರಾಗಿದ್ದೀ.

25ಈಗ ಓ ಕರ್ತನಾದ ದೇವರೇ, ನೀನು ನಿನ್ನ ದಾಸನನ್ನು ಕುರಿತೂ ಅವನ ಮನೆಯನ್ನು ಕುರಿತೂ ಹೇಳಿದ ವಾಕ್ಯವನ್ನು ಶಾಶ್ವತಕ್ಕೂ ಸ್ಥಿರಪಡಿಸಿ ನೀನು ಹೇಳಿದ ಹಾಗೆಯೇ ಮಾಡು.

26ಸೈನ್ಯಗಳ ಕರ್ತನು ಇಸ್ರಾಯೇಲಿನ ಮೇಲೆ ದೇವರಾಗಿದ್ದಾನೆಂದು ಸದಾಕಾಲಕ್ಕೂ ನಿನ್ನ ನಾಮವು ಘನಹೊಂದಲಿ. ಇದಲ್ಲದೆ ನಿನ್ನ ದಾಸನಾದ ದಾವೀ ದನ ಮನೆಯು ನಿನ್ನ ಮುಂದೆ ಸ್ಥಿರವಾಗಿರಲಿ.

27ಸೈನ್ಯ ಗಳ ಓ ಕರ್ತನೇ, ಇಸ್ರಾಯೇಲಿನ ದೇವರೇ, ನಿನ್ನ ದಾಸನಿಗೆ--ನಾನು ನಿನಗೆ ಮನೆಯನ್ನು ಕಟ್ಟುವೆನೆಂದು ಪ್ರಕಟಮಾಡಿದ್ದರಿಂದ ನಿನ್ನನ್ನು ಕುರಿತು ಈ ಪ್ರಾರ್ಥನೆ ಯನ್ನು ಪ್ರಾರ್ಥಿಸುವದಕ್ಕೆ ನಿನ್ನ ದಾಸನ ಹೃದಯದಲ್ಲಿ ಉಂಟಾಯಿತು.

28ಈಗ ಓ ಕರ್ತನಾದ ದೇವರೇ, ನೀನೇ ದೇವರಾದಾತನು, ನಿನ್ನ ವಾಕ್ಯಗಳು ಸತ್ಯವು; ನಿನ್ನ ದಾಸನಿಗೆ ಈ ಒಳ್ಳೇದನ್ನು ವಾಗ್ದಾನಮಾಡಿದಿ.

೨ ಸಮುವೇಲನು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी