ಅದಕ್ಕವನು--ನಾನು ನಿನ್ನನ್ನು ಕರೆಯಲಿಲ್ಲ; ಹೋಗಿ ಮಲಗಿಕೋ ಅಂದನು.
3ದೇವರ ಮಂಜೂಷವಿರುವ ಕರ್ತನ ಮಂದಿರದಲ್ಲಿ ದೇವರ ದೀಪವು ಆರಿಹೋಗು ವದಕ್ಕಿಂತ ಮುಂಚೆ ಸಮುವೇಲನು ಮಲಗಿದ್ದನು; ಆಗ ಕರ್ತನು ಸಮುವೇಲನನ್ನು ಕರೆದನು.
4ಅದಕ್ಕ ವನು--ಇಗೋ, ನಾನು ಇಲ್ಲಿ ಇದ್ದೇನೆ ಎಂದು ಹೇಳಿ ಏಲಿಯ ಬಳಿಗೆ ಓಡಿಹೋಗಿ,--ಇಗೋ, ಇಲ್ಲಿ ಇದ್ದೇನೆ; ನೀನು ನನ್ನನ್ನು ಕರೆದಿಯಲ್ಲಾ ಅಂದನು.
5ಅದಕ್ಕವನು--ನಾನು ನಿನ್ನನ್ನು ಕರೆಯಲಿಲ್ಲ; ಹೋಗಿ ಮಲಗಿಕೋ ಅಂದನು.
6ಅವನು ಹೋಗಿ ಹಾಗೆಯೇ ಮಲಗಿದನು. ಕರ್ತನು--ಸಮುವೇಲನೇ ಎಂದು ಅವ ನನ್ನು ತಿರಿಗಿ ಕರೆದನು. ಆಗ ಸಮುವೇಲನು ಎದ್ದು ಏಲಿಯ ಬಳಿಗೆ ಹೋಗಿ--ಇಗೋ, ಇದ್ದೇನೆ; ನೀನು ನನ್ನನ್ನು ಕರೆದಿಯಲ್ಲಾ ಅಂದನು. ಅದಕ್ಕವನು--ನನ್ನ ಮಗನೇ, ನಾನು ನಿನ್ನನ್ನು ಕರೆಯಲಿಲ್ಲ; ಹೋಗಿ ಮಲ ಗಿಕೋ ಅಂದನು.
7ಆದರೆ ಸಮುವೇಲನು ಆ ವರೆಗೂ ಕರ್ತನನ್ನು ಅರಿತವನೂ ಅಲ್ಲ; ಕರ್ತನ ವಾಕ್ಯವು ಅವನಿಗೆ ಪ್ರಕಟಿಸಲ್ಪಟ್ಟಿರಲೂ ಇಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ