ನಾನು ಐಗುಪ್ತರನ್ನು ಜನಾಂಗಗಳೊಳಗೆ ಚದರಿಸಿ ದೇಶಗಳಲ್ಲಿ ಹರಡಿಸು ತ್ತೇನೆ; ಆಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
24ಬಾಬೆಲಿನ ಅರಸನ ತೋಳು ಗಳನ್ನು ನಾನು ಬಲಪಡಿಸುವೆನು; ಅವನ ಕೈಯಲ್ಲಿ ನನ್ನ ಕತ್ತಿಯನ್ನಿಡುವೆನು; ಫರೋಹನ ತೋಳನ್ನು ಮುರಿಯುವೆನು, ಅವನು ಗಾಯದಿಂದ ಸಾಯುವ ಹಾಗೆ ಅವನ ಮುಂದೆ ನರಳಾಡುವನು.
25ನಾನು ಬಾಬೆಲಿನ ಅರಸನ ತೋಳುಗಳಿಗೆ ಬಲ ಕೊಡುವೆನು, ಫರೋಹನ ತೋಳುಗಳು ಬಿದ್ದು ಹೋಗುವವು; ಯಾವಾಗ ನಾನು ನನ್ನ ಕತ್ತಿಯನ್ನು ಬಾಬೆಲಿನ ಅರಸನ ಕೈಗೆ ಕೊಡುವೆನೋ ಅದನ್ನು ಐಗುಪ್ತದೇಶದಿಂದ ಹೊರಗೆ ಚಾಚುವೆನೋ ಆಗ ನಾನೇ ಕರ್ತನೆಂದು ಅವರಿಗೆ ಗೊತ್ತಾಗುವದು.
26ನಾನು ಐಗುಪ್ತರನ್ನು ಜನಾಂಗಗಳೊಳಗೆ ಚದರಿಸಿ ದೇಶಗಳಲ್ಲಿ ಹರಡಿಸು ತ್ತೇನೆ; ಆಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ