ಯಾಜಕಕಾಂಡ 23:18

ಇದಲ್ಲದೆ ನೀವು ರೊಟ್ಟಿಯೊಂದಿಗೆ ದೋಷವಿಲ್ಲದ ಒಂದು ವರುಷದ ಏಳು ಕುರಿಮರಿಗಳನ್ನೂ ಒಂದು ಎಳೇ ಹೋರಿಯನ್ನೂ ಎರಡು ಟಗರುಗಳನ್ನೂ ಸಮರ್ಪಿಸ ಬೇಕು; ಅವು ಕರ್ತನಿಗೆ ದಹನಬಲಿಯಾಗಿರುವವು. ಅವುಗಳೊಂದಿಗೆ ಆಹಾರ ಬಲಿಯು ಪಾನಾರ್ಪಣೆಗಳು ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾಸನೆಯಾದ ಅರ್ಪಣೆಗಳಾಗಿರಬೇಕು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 23

16ಏಳ ನೆಯ ಸಬ್ಬತ್ತಿನ ಮಾರನೆಯ ದಿನದಿಂದ ನೀವು ಐವತ್ತು ದಿನಗಳನ್ನು ಲೆಕ್ಕಿಸಬೇಕು. ನೀವು ಕರ್ತನಿಗೆ ಹೊಸ ಆಹಾರ ಬಲಿಯನ್ನು ಅರ್ಪಿಸಬೇಕು.

17ಇದಲ್ಲದೆ ನೀವು ನಿಮ್ಮ ನಿವಾಸಗಳಿಂದ ಹತ್ತನೆಯ ಎರಡು ಭಾಗ ಗಳ ಆಡಿಸುವ ಎರಡು ರೊಟ್ಟಿಗಳನ್ನು ಹೊರಗೆ ತರ ಬೇಕು. ಅವು ನಯವಾದ ಹಿಟ್ಟಿನಿಂದಾದವುಗಳಾಗಿರ ಬೇಕು. ಅವುಗಳು ಹುಳಿ ಕಲಸಿ ಸುಟ್ಟವುಗಳಾಗಿರಬೇಕು. ಅವು ಕರ್ತನಿಗೆ ಪ್ರಥಮ ಫಲಗಳು.

18ಇದಲ್ಲದೆ ನೀವು ರೊಟ್ಟಿಯೊಂದಿಗೆ ದೋಷವಿಲ್ಲದ ಒಂದು ವರುಷದ ಏಳು ಕುರಿಮರಿಗಳನ್ನೂ ಒಂದು ಎಳೇ ಹೋರಿಯನ್ನೂ ಎರಡು ಟಗರುಗಳನ್ನೂ ಸಮರ್ಪಿಸ ಬೇಕು; ಅವು ಕರ್ತನಿಗೆ ದಹನಬಲಿಯಾಗಿರುವವು. ಅವುಗಳೊಂದಿಗೆ ಆಹಾರ ಬಲಿಯು ಪಾನಾರ್ಪಣೆಗಳು ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾಸನೆಯಾದ ಅರ್ಪಣೆಗಳಾಗಿರಬೇಕು.

19ತರುವಾಯ ಆಡುಗಳೊ ಳಗೆ ಒಂದು ಮರಿಯನ್ನು ಪಾಪಬಲಿಯಾಗಿಯೂ ಮತ್ತು ಒಂದು ವರುಷದ ಎರಡು ಕುರಿಮರಿಗಳನ್ನು ಸಮಾಧಾನ ಯಜ್ಞಬಲಿಗಳಾಗಿಯೂ ಅರ್ಪಿಸಬೇಕು.

20ಯಾಜಕನು ಕರ್ತನ ಸನ್ನಿಧಿಯಲ್ಲಿ ಆಡಿಸುವ ಸಮರ್ಪಣೆಗಾಗಿ ಪ್ರಥಮ ಫಲದ ರೊಟ್ಟಿಯೊಂದಿಗೂ ಎರಡು ಕುರಿಮರಿಗಳೊಂದಿಗೂ ಅವುಗಳನ್ನು ಆಡಿಸ ಬೇಕು. ಅವು ಕರ್ತನಿಗೆ ಪರಿಶುದ್ಧವಾಗಿದ್ದು ಯಾಜಕ ನಿಗೋಸ್ಕರ ಇರಬೇಕು.

ಯಾಜಕಕಾಂಡ 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी