ಯೆರೆಮಿಯ 28:11

ಹನನ್ಯನು ಜನರೆಲ್ಲರ ಮುಂದೆ ಹೇಳಿದ್ದೇನಂದರೆ --ಕರ್ತನು ಹೀಗೆ ಹೇಳುತ್ತಾನೆ--ಇದೇ ಪ್ರಕಾರ ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರುಷದೊಳಗಾಗಿ ಎಲ್ಲಾ ಜನಾಂಗಗಳ ಕುತ್ತಿ ಗೆಯ ಮೇಲಿನಿಂದ ಮುರಿದು ಹಾಕುವೆನು ಅಂದನು. ಆಗ ಪ್ರವಾದಿಯಾದ ಯೆರೆವಿಾಯನು ತನ್ನ ಮಾರ್ಗ ವಾಗಿ ಹೋದನು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 28

9ಸಮಾಧಾನ ವನ್ನು ಕುರಿತು ಪ್ರವಾದಿಸುವ ಪ್ರವಾದಿಯಾದರೆ ಆ ಪ್ರವಾದಿಯ ವಾಕ್ಯವು ಉಂಟಾಗುವಾಗ ಅವನು ದೇವ ರಿಂದ ನಿಜವಾಗಿ ಕಳುಹಿಸಲ್ಪಟ್ಟ ಪ್ರವಾದಿ ಎಂದು ತಿಳಿಯತಕ್ಕದ್ದು ಅಂದನು.

10ಆಗ ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರವಿಾಯನ ಕುತ್ತಿಗೆ ಯಿಂದ ನೊಗವನ್ನು ತೆಗೆದು ಅದನ್ನು ಮುರಿದುಬಿಟ್ಟನು.

11ಹನನ್ಯನು ಜನರೆಲ್ಲರ ಮುಂದೆ ಹೇಳಿದ್ದೇನಂದರೆ --ಕರ್ತನು ಹೀಗೆ ಹೇಳುತ್ತಾನೆ--ಇದೇ ಪ್ರಕಾರ ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರುಷದೊಳಗಾಗಿ ಎಲ್ಲಾ ಜನಾಂಗಗಳ ಕುತ್ತಿ ಗೆಯ ಮೇಲಿನಿಂದ ಮುರಿದು ಹಾಕುವೆನು ಅಂದನು. ಆಗ ಪ್ರವಾದಿಯಾದ ಯೆರೆವಿಾಯನು ತನ್ನ ಮಾರ್ಗ ವಾಗಿ ಹೋದನು.

12ಆಗ ಪ್ರವಾದಿಯಾದ ಹನನ್ಯನು ಆ ನೊಗವನ್ನು ಪ್ರವಾದಿಯಾದ ಯೆರೆವಿಾಯನ ಕುತ್ತಿಗೆಯ ಮೇಲಿನಿಂದ ಮುರಿದು ಹಾಕಿದ ಮೇಲೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--

13ಹೋಗಿ ಹನನ್ಯನಿಗೆ ಹೀಗೆ ಹೇಳು--ನೀನು ಮರದ ನೊಗಗಳನ್ನು ಮುರಿದಿದ್ದೀ; ಆದರೆ ಅವುಗಳಿಗೆ ಬದಲಾಗಿ ಕಬ್ಬಿಣದ ನೊಗಗಳನ್ನು ಉಂಟುಮಾಡುವಿ ಎಂದು ಕರ್ತನು ಹೇಳುತ್ತಾನೆ.

ಯೆರೆಮಿಯ 28 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी