೧ ಸಮುವೇಲನು 18:11

ಆಗ ಸೌಲನು ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯುವೆನೆಂದು ಈಟಿಯನ್ನು ಎಸೆದನು. ಆದರೆ ದಾವೀದನು ಎರಡು ಸಾರಿ ಅವನ ಸಮ್ಮುಖದಿಂದ ತಪ್ಪಿಸಿಕೊಂಡನು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 18

9ಆ ದಿವಸ ಮೊದಲು ಗೊಂಡು ಸೌಲನು ದಾವೀದನ ಮೇಲೆ ಕಣ್ಣಿಟ್ಟನು.

10ಮಾರನೆ ದಿವಸದಲ್ಲಿ ದೇವರಿಂದ ಬಂದ ದುರಾತ್ಮವು ಸೌಲನ ಮೇಲೆ ಇಳಿಯಿತು. ಅವನು ಮನೆಯ ಮಧ್ಯ ದಲ್ಲಿ ಪ್ರವಾದಿಸುತ್ತಿದ್ದನು (ಕಾಲಜ್ಞಾನ). ಆಗ ದಾವೀ ದನು ಪ್ರತಿದಿನ ಮಾಡುತ್ತಿದ್ದ ಹಾಗೆಯೇ ತನ್ನ ಕೈಯಿಂದ ಬಾರಿಸುತ್ತಿದ್ದನು. ಆದರೆ ಸೌಲನ ಕೈಯಲ್ಲಿ ಈಟಿಯು ಇತ್ತು.

11ಆಗ ಸೌಲನು ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯುವೆನೆಂದು ಈಟಿಯನ್ನು ಎಸೆದನು. ಆದರೆ ದಾವೀದನು ಎರಡು ಸಾರಿ ಅವನ ಸಮ್ಮುಖದಿಂದ ತಪ್ಪಿಸಿಕೊಂಡನು.

12ಸೌಲನು ದಾವೀದನಿಗೆ ಭಯಪಟ್ಟನು; ಕರ್ತನು ಅವನ ಸಂಗಡ ಇದ್ದನು. ಕರ್ತನು ಸೌಲನ ಕಡೆಯಿಂದ ಹೊರಟು ಹೋಗಿದ್ದನು;

13ಆದದರಿಂದ ಸೌಲನು ಅವನನ್ನು ತನ್ನ ಬಳಿಯಿಂದ ಹೊರಡಿಸಿಬಿಟ್ಟು ಸಾವಿರ ಜನಕ್ಕೆ ಪ್ರಧಾನನನ್ನಾಗಿ ಮಾಡಿದನು. ಹಾಗೆಯೇ ಅವನು ಜನರ ಮುಂದೆ ಹೊರಟು ಹೋಗುತ್ತಾ ಬರುತ್ತಾ ಇದ್ದನು.

೧ ಸಮುವೇಲನು 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी