ಆದರೆ ನಾನು ಎದ್ದ ಮೇಲೆ ನಿಮಗಿಂತ ಮುಂಚಿತ ವಾಗಿ ಗಲಿಲಾಯಕ್ಕೆ ಹೋಗುವೆನು ಅಂದನು.
30ತರುವಾಯ ಅವರು ಕೀರ್ತನೆ ಹಾಡಿ ಎಣ್ಣೇ ಮರಗಳ ಗುಡ್ಡಕ್ಕೆ ಹೋದರು.
31ಆಮೇಲೆ ಯೇಸು ಅವರಿಗೆ--ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಅಭ್ಯಂತರಪಡುವಿರಿ; ಯಾಕಂದರೆ-- ನಾನು ಕುರುಬನನ್ನು ಹೊಡೆಯುವೆನು; ಮಂದೆ ಯ ಕುರಿಗಳು ಚದರಿಹೋಗುವವು ಎಂದು ಬರೆದದೆ;
32ಆದರೆ ನಾನು ಎದ್ದ ಮೇಲೆ ನಿಮಗಿಂತ ಮುಂಚಿತ ವಾಗಿ ಗಲಿಲಾಯಕ್ಕೆ ಹೋಗುವೆನು ಅಂದನು.
33ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ-- ಎಲ್ಲರೂ ನಿನ್ನ ವಿಷಯದಲ್ಲಿ ಅಭ್ಯಂತರಪಟ್ಟರೂ ನಾನು ಎಂದಿಗೂ ಅಭ್ಯಂತರಪಡುವದಿಲ್ಲ ಅಂದನು.
34ಯೇಸು ಅವ ನಿಗೆ--ಈ ರಾತ್ರಿಯಲ್ಲಿ ಹುಂಜ ಕೂಗುವದಕ್ಕಿಂತ ಮುಂಚೆ ಮೂರು ಸಾರಿ ನನ್ನನ್ನು ಅಲ್ಲಗಳೆಯುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ