ವಿಮೋಚನಕಾಂಡ 12:28

ಇಸ್ರಾಯೇಲ್‌ ಮಕ್ಕಳು ಹೊರಟುಹೋಗಿ ಕರ್ತನು ಮೋಶೆ ಆರೋನರಿಗೆ ಆಜ್ಞಾಪಿಸಿದ ಮೇರೆಗೆ ಅವರು ಮಾಡಿದರು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 12

26ನಿಮ್ಮ ಮಕ್ಕಳು ಈ ಆಚಾರದ ಅರ್ಥವೇನು ಎಂದು ಕೇಳಿದಾಗ

27ನೀವು ಅವ ರಿಗೆ--ಕರ್ತನು ಐಗುಪ್ತದೇಶದಲ್ಲಿ ಐಗುಪ್ತ್ಯರನ್ನು ಸಂಹರಿಸಿ ನಮ್ಮ ಮನೆಗಳನ್ನು ಕಾಪಾಡುವದಕ್ಕಾಗಿ ಇಸ್ರಾಯೇಲ್‌ ಮಕ್ಕಳ ಮನೆಗಳನ್ನು ದಾಟಿಹೋದ ಕರ್ತನ ಪಸ್ಕವೇ ಇದು ಎಂದು ನೀವು ಹೇಳಬೇಕು ಅಂದನು. ಆಗ ಜನರು ತಲೆಬಾಗಿಸಿ ಆರಾಧಿಸಿದರು.

28ಇಸ್ರಾಯೇಲ್‌ ಮಕ್ಕಳು ಹೊರಟುಹೋಗಿ ಕರ್ತನು ಮೋಶೆ ಆರೋನರಿಗೆ ಆಜ್ಞಾಪಿಸಿದ ಮೇರೆಗೆ ಅವರು ಮಾಡಿದರು.

29ಮಧ್ಯರಾತ್ರಿಯಲ್ಲಿ ನಡೆದದ್ದೇನಂದರೆ, ಸಿಂಹಾ ಸನದ ಮೇಲೆ ಕೂತುಕೊಂಡ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನ ವರೆಗೂ ಅಂದರೆ ಐಗುಪ್ತದೇಶ ದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವನ್ನೂ ಕರ್ತನು ಸಂಹರಿಸಿದನು.

30ಆಗ ಫರೋಹನೂ ಅವನ ಎಲ್ಲಾ ಸೇವಕರೂ ಎಲ್ಲಾ ಐಗುಪ್ತ್ಯರೂ ರಾತ್ರಿಯಲ್ಲಿ ಎದ್ದರು. ಆಗ ಐಗುಪ್ತದಲ್ಲಿ ದೊಡ್ಡ ಗೋಳಾಟವಾಯಿತು. ಅಲ್ಲಿ ಸತ್ತವರಿಲ್ಲದ ಒಂದು ಮನೆಯಾದರೂ ಇರಲಿಲ್ಲ.

ವಿಮೋಚನಕಾಂಡ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी