ನೆಹೆಮಿಯ 12:44

ಅದೇ ಕಾಲದಲ್ಲಿ ಯಾಜಕರಿಗೋಸ್ಕರವೂ ಲೇವಿ ಯರಿಗೋಸ್ಕರವೂ ನ್ಯಾಯಪ್ರಮಾಣದಲ್ಲಿ ನೇಮಿಸ ಲ್ಪಟ್ಟ ಪ್ರಕಾರ ಪಟ್ಟಣಗಳ ಹೊಲಗಳಿಂದ ಬರಬೇಕಾದ ಪಾಲುಗಳನ್ನು ಕೂಡಿಸುವ ಹಾಗೆ ಬೊಕ್ಕಸಗಳನ್ನೂ ಕಾಣಿಕೆಗಳನ್ನೂ ಪ್ರಥಮ ಫಲಗಳನ್ನೂ ಹತ್ತನೇ ಪಾಲು ಗಳನ್ನೂ ಇರಿಸುವ ಉಗ್ರಾಣಗಳ ಮೇಲೆ ಕೆಲವರು ನೇಮಿಸಲ್ಪಟ್ಟಿದ್ದರು. ಸೇವೆಮಾಡುವ ಯಾಜಕರನ್ನೂ ಲೇವಿಯರನ್ನೂ ಕುರಿತು ಯೆಹೂದದವರು ಸಂತೋಷ ಪಟ್ಟರು.

ಸಂದರ್ಭದೊಂದಿಗೆ ಓದಿ · ನೆಹೆಮಿಯ 12

42ಮಾಸೇಯನೂ ಶೆಮಾಯನೂ ಎಲ್ಲಾಜಾರನೂ ಉಜ್ಜೀಯೂ ಯೆಹೋ ಹಾನಾನನೂ ಮಲ್ಕೀಯನೂ ಏಲಾಮನೂ ಎಜೆರನು; ತಮ್ಮ ಮೇಲ್ವಿಚಾರಕನಾದ ಇಜ್ರಹ್ಯನ ಸಂಗಡ ಹಾಡುಗಾರರು ಗಟ್ಟಿಯಾಗಿ ಹಾಡಿದರು.

43ಆ ದಿವಸದಲ್ಲಿ ಮಹಾಬಲಿಗಳನ್ನು ಅರ್ಪಿಸಿ ದೇವರು ಅವರನ್ನು ಮಹಾ ಸಂತೋಷದಿಂದ ಸಂತೋಷಿಸಲು ಮಾಡಿದ್ದರಿಂದ ಅವರು ಸಂತೋಷಪಟ್ಟರು. ಇದಲ್ಲದೆ ಹೆಂಡತಿಯರೂ ಮಕ್ಕಳೂ ಸಂತೋಷಿಸಿದರು. ಆದದರಿಂದ ಯೆರೂಸ ಲೇಮಿನ ಸಂತೋಷದ ಧ್ವನಿಯು ಬಹುದೂರಕ್ಕೆ ಕೇಳಲ್ಪಟ್ಟಿತು.

44ಅದೇ ಕಾಲದಲ್ಲಿ ಯಾಜಕರಿಗೋಸ್ಕರವೂ ಲೇವಿ ಯರಿಗೋಸ್ಕರವೂ ನ್ಯಾಯಪ್ರಮಾಣದಲ್ಲಿ ನೇಮಿಸ ಲ್ಪಟ್ಟ ಪ್ರಕಾರ ಪಟ್ಟಣಗಳ ಹೊಲಗಳಿಂದ ಬರಬೇಕಾದ ಪಾಲುಗಳನ್ನು ಕೂಡಿಸುವ ಹಾಗೆ ಬೊಕ್ಕಸಗಳನ್ನೂ ಕಾಣಿಕೆಗಳನ್ನೂ ಪ್ರಥಮ ಫಲಗಳನ್ನೂ ಹತ್ತನೇ ಪಾಲು ಗಳನ್ನೂ ಇರಿಸುವ ಉಗ್ರಾಣಗಳ ಮೇಲೆ ಕೆಲವರು ನೇಮಿಸಲ್ಪಟ್ಟಿದ್ದರು. ಸೇವೆಮಾಡುವ ಯಾಜಕರನ್ನೂ ಲೇವಿಯರನ್ನೂ ಕುರಿತು ಯೆಹೂದದವರು ಸಂತೋಷ ಪಟ್ಟರು.

45ಇದಲ್ಲದೆ ದಾವೀದನೂ ಅವನ ಮಗ ನಾದ ಸೊಲೊಮೋನನೂ ಕೊಟ್ಟ ಆಜ್ಞೆಯ ಪ್ರಕಾರ ಹಾಡುಗಾರರೂ ದ್ವಾರಪಾಲಕರೂ ತಮ್ಮ ದೇವರ ಸೇವೆಯ ಸಂಬಂಧದಲ್ಲಿಯೂ ಶುದ್ಧೀಕರಣದ ಸಂಬ ಂಧದಲ್ಲಿಯೂ ತಮ್ಮ ಕೆಲಸಗಳನ್ನು ನಡಿಸುತ್ತಿದ್ದರು.

46ಯಾಕಂದರೆ ದಾವೀದನ ಮತ್ತು ಆಸಾಫನ ದಿವ ಸಗಳಲ್ಲಿ ದೇವರಿಗೆ ಸ್ತೋತ್ರವನ್ನೂ ಕೊಂಡಾಟವನ್ನೂ ಹಾಡತಕ್ಕ ಹಾಡುಗಾರರಲ್ಲಿ ಮುಖ್ಯಸ್ಥರಾಗಿ ದ್ದರು.

ನೆಹೆಮಿಯ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी