ಅರಣ್ಯಕಾಂಡ 23:9

ಬಂಡೆಗಳ ತುದಿಯಿಂದ ಅವನನ್ನು ನೋಡು ತ್ತೇನೆ; ಗುಡ್ಡಗಳಿಂದ ಅವನನ್ನು ದೃಷ್ಟಿಸಿದ್ದೇನೆ; ಇಗೋ, ಆ ಜನಾಂಗವು ಒಂಟಿಯಾಗಿ ವಾಸಿಸುವದು, ಜನಾಂಗ ಗಳಲ್ಲಿ ಅದು ಎಣಿಸಲ್ಪಡುವದಿಲ್ಲ.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 23

7ಆಗ ಅವನು ಸಾಮ್ಯರೂಪವಾಗಿ--ಮೋವಾಬಿನ ಅರಸನಾದ ಬಾಲಾಕನು ನನ್ನನ್ನು ಅರಾಮಿನಿಂದಲೂ ಪೂರ್ವ ಪರ್ವತಗಳಿಂದಲೂ ಕರೆಯಿಸಿ--ನನಗೋ ಸ್ಕರ ಯಾಕೋಬನನ್ನು ಶಪಿಸ ಬಾ; ಇಸ್ರಾಯೇಲನ್ನು ಎದುರಿಸುವದಕ್ಕೆ ಬಾ ಎಂದು ನನಗೆ ಹೇಳಿದ್ದಾನೆ.

8ದೇವರು ಶಪಿಸದವನನ್ನು ನಾನು ಹೇಗೆ ಶಪಿಸಲಿ? ಕರ್ತನು ಎದುರಿಸದವನನ್ನು ನಾನು ಹೇಗೆ ಎದುರಿ ಸಲಿ?

9ಬಂಡೆಗಳ ತುದಿಯಿಂದ ಅವನನ್ನು ನೋಡು ತ್ತೇನೆ; ಗುಡ್ಡಗಳಿಂದ ಅವನನ್ನು ದೃಷ್ಟಿಸಿದ್ದೇನೆ; ಇಗೋ, ಆ ಜನಾಂಗವು ಒಂಟಿಯಾಗಿ ವಾಸಿಸುವದು, ಜನಾಂಗ ಗಳಲ್ಲಿ ಅದು ಎಣಿಸಲ್ಪಡುವದಿಲ್ಲ.

10ಯಾಕೋಬನ ಧೂಳನ್ನು ಎಣಿಸುವದಕ್ಕೂ ಇಸ್ರಾಯೇಲಿನ ನಾಲ್ಕನೇ ಒಂದು ಪಾಲನ್ನಾದರೂ ಲೆಕ್ಕ ಮಾಡುವದಕ್ಕೂ ಯಾರಿಂದಾದೀತು? ನೀತಿವಂತನು ಸಾಯುವಂತೆ ನಾನೂ ಸಾಯಬೇಕು, ನನ್ನ ಕಡೇ ಅಂತ್ಯವು ಅವನಂತೆಯೇ ಆಗಲಿ ಎಂದು ಹೇಳಿದನು.

11ಆಗ ಬಾಲಾಕನು ಬಿಳಾಮನಿಗೆ--ಇದೇನು ನೀನು ನನಗೆ ಮಾಡಿದ್ದು? ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರೆಯಿಸಿದೆನು; ಇಗೋ, ನೀನು ಅವರನ್ನು ಸಂಪೂರ್ಣ ವಾಗಿ ಆಶೀರ್ವದಿಸಿದಿ ಅಂದನು.

ಅರಣ್ಯಕಾಂಡ 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी