ಯೆಶಾಯ 43:3

ನಾನೇ ನಿನ್ನ ಕರ್ತನೂ ದೇವರೂ ಇಸ್ರಾಯೇಲಿನ ಪರಿಶುದ್ಧನೂ ರಕ್ಷಕನೂ ಆಗಿದ್ದೇನೆ. ಐಗುಪ್ತವನ್ನು ನಿನ್ನ ವಿಮೋಚನೆಗೂ ಇಥಿಯೋಪ್ಯ ಮತ್ತು ಸೆಬಾ ಸೀಮೆಗಳನ್ನು ನಿನಗೊಸ್ಕರ ಕೊಟ್ಟಿದ್ದೇನೆ.

ಸಂದರ್ಭದೊಂದಿಗೆ ಓದಿ · ಯೆಶಾಯ 43

1ಈಗಲಾದರೋ ಓ ಯಾಕೋಬೇ, ಇಸ್ರಾಯೇಲೇ ನಿನ್ನನ್ನು ಸೃಷ್ಟಿಸಿದಾತನೂ ರೂಪಿಸಿದಾತನೂ ಆದ ಕರ್ತನು ಇಂತೆನ್ನುತ್ತಾನೆ--ಹೆದರಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ ನಿನ್ನ ಹೆಸರು ಹಿಡಿದು ಕರೆದೆನಲ್ಲಾ; ನೀನು ನನ್ನವನೇ.

2ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.

3ನಾನೇ ನಿನ್ನ ಕರ್ತನೂ ದೇವರೂ ಇಸ್ರಾಯೇಲಿನ ಪರಿಶುದ್ಧನೂ ರಕ್ಷಕನೂ ಆಗಿದ್ದೇನೆ. ಐಗುಪ್ತವನ್ನು ನಿನ್ನ ವಿಮೋಚನೆಗೂ ಇಥಿಯೋಪ್ಯ ಮತ್ತು ಸೆಬಾ ಸೀಮೆಗಳನ್ನು ನಿನಗೊಸ್ಕರ ಕೊಟ್ಟಿದ್ದೇನೆ.

4ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ ಮಾನ್ಯನೂ ಪ್ರಿಯನೂ ಆಗಿರುವದರಿಂದ ನಾನು ನಿನಗೋಸ್ಕರ ಮನುಷ್ಯರನ್ನೂ ನಿನ್ನ ಪ್ರಾಣಕ್ಕೆ (ಪ್ರತಿಯಾಗಿ) ಜನಾಂಗಗಳನ್ನೂ ಕೊಡುವೆನು.

5ಭಯಪಡಬೇಡ; ನಾನೇ ನಿನ್ನೊಂದಿಗೆ ಇದ್ದೇನೆ; ನಿನ್ನ ಸಂತತಿಯವರನ್ನು ಮೂಡಣದಿಂದ ತರುವೆನು; ಪಶ್ಚಿಮದಿಂದ ನಿನ್ನನ್ನು ಕೂಡಿಸುವೆನು.

ಯೆಶಾಯ 43 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी