ಕುರಿಗಳ ಹಾಗೆ ತನ್ನ ಜನರನ್ನು ಹೊರತಂದು, ಮಂದೆಯ ಹಾಗೆ ಅರಣ್ಯದಲ್ಲಿ ಅವರನ್ನು ನಡಿಸಿದನು.
50ತನ್ನ ಕೋಪಕ್ಕೆ ದಾರಿಮಾಡಿ ಅವರ ಪ್ರಾಣವನ್ನು ಸಾವಿನಿಂದ ಉಳಿಸದೆ ಅವರ ಜೀವವನ್ನು ಜಾಡ್ಯಕ್ಕೆ ಒಪ್ಪಿಸಿ
51ಐಗುಪ್ತದಲ್ಲಿ ಚೊಚ್ಚಲವಾದವರೆಲ್ಲರನ್ನೂ ಹಾಮನ ಗುಡಾರಗಳಲ್ಲಿ ಶಕ್ತಿಯ ಪ್ರಥಮ ಫಲವನ್ನೂ ಹೊಡೆದನು.
52ಕುರಿಗಳ ಹಾಗೆ ತನ್ನ ಜನರನ್ನು ಹೊರತಂದು, ಮಂದೆಯ ಹಾಗೆ ಅರಣ್ಯದಲ್ಲಿ ಅವರನ್ನು ನಡಿಸಿದನು.
53ಅವರನ್ನು ಸುರಕ್ಷಿತವಾಗಿ ನಡಿಸಿದಕಾರಣ ಅವರು ಹೆದರಲಿಲ್ಲ; ಆದರೆ ಸಮುದ್ರವು ಅವರ ಶತ್ರುಗಳನ್ನು ಮುಚ್ಚಿಬಿಟ್ಟಿತು.
54ತನ್ನ ಪರಿಶುದ್ದಾಲಯದ ಮೇರೆಗೂ ಆತನ ಬಲಗೈ ಕೊಂಡುಕೊಂಡ ಈ ಪರ್ವತಕ್ಕೂ ಅವರನ್ನು ಬರ ಮಾಡಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ