ಮತ್ತಾಯನು 28:7

ಬೇಗನೆ ಹೋಗಿ ಆತನು ಸತ್ತವರೊಳಗಿಂದ ಎದ್ದಿದ್ದಾನೆ ಎಂದು ಆತನ ಶಿಷ್ಯರಿಗೆ ಹೇಳಿರಿ; ಮತ್ತು ಇಗೋ, ನಿಮಗೆ ಮುಂದಾಗಿ ಆತನು ಗಲಿಲಾಯಕ್ಕೆ ಹೋಗುತ್ತಾನೆ. ನೀವು ಆತನನ್ನು ಅಲ್ಲಿ ಕಾಣುವಿರಿ; ಇಗೋ, ನಾನು ನಿಮಗೆ ಹೇಳಿದ್ದೇನೆ ಅಂದನು.

ಸಂದರ್ಭದೊಂದಿಗೆ ಓದಿ · ಮತ್ತಾಯನು 28

5ಆ ದೂತನು ಸ್ತ್ರೀಯರಿಗೆ-- ನೀವು ಭಯಪಡಬೇಡಿರಿ; ಯಾಕಂದರೆ ಶಿಲುಬೆಗೆ ಹಾಕಲ್ಪಟ್ಟವನಾದ ಯೇಸುವನ್ನು ನೀವು ಹುಡುಕುತ್ತೀರೆಂದು ನಾನು ಬಲ್ಲೆನು.

6ಆತನು ಇಲ್ಲಿ ಇಲ್ಲ; ಯಾಕಂದರೆ ಆತನು ಹೇಳಿರುವ ಪ್ರಕಾರ ಆತನು ಎದ್ದಿದ್ದಾನೆ; ಕರ್ತನು ಮಲಗಿದ್ದ ಸ್ಥಳವನ್ನು ಬಂದು ನೋಡಿರಿ.

7ಬೇಗನೆ ಹೋಗಿ ಆತನು ಸತ್ತವರೊಳಗಿಂದ ಎದ್ದಿದ್ದಾನೆ ಎಂದು ಆತನ ಶಿಷ್ಯರಿಗೆ ಹೇಳಿರಿ; ಮತ್ತು ಇಗೋ, ನಿಮಗೆ ಮುಂದಾಗಿ ಆತನು ಗಲಿಲಾಯಕ್ಕೆ ಹೋಗುತ್ತಾನೆ. ನೀವು ಆತನನ್ನು ಅಲ್ಲಿ ಕಾಣುವಿರಿ; ಇಗೋ, ನಾನು ನಿಮಗೆ ಹೇಳಿದ್ದೇನೆ ಅಂದನು.

8ಅವರು ಭಯದಿಂದಲೂ ಮಹಾ ಸಂತೋಷದಿಂದಲೂ ಸಮಾಧಿಯಿಂದ ಬೇಗನೆ ಹೊರಟು ಆತನ ಶಿಷ್ಯರಿಗೆ ತಿಳಿಸುವದಕ್ಕಾಗಿ ಓಡಿಹೋದರು.

9ಅವರು ಆತನ ಶಿಷ್ಯರಿಗೆ ತಿಳಿಸು ವದಕ್ಕೆ ಹೋಗುತ್ತಿದ್ದಾಗ ಇಗೋ, ಯೇಸು ಅವರನ್ನು ಸಂಧಿಸಿ--ಶುಭವಾಗಲಿ ಅಂದನು. ಆಗ ಅವರು ಬಂದು ಆತನ ಪಾದಗಳನ್ನು ಹಿಡಿದು ಆತನನ್ನು ಆರಾಧಿಸಿದರು.

ಮತ್ತಾಯನು 28 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी