ಧರ್ಮೋಪದೇಶಕಾಂಡ 28:61

ನೀನು ಪೂರ್ಣವಾಗಿ ನಾಶವಾಗುವ ವರೆಗೆ ಈ ನ್ಯಾಯ ಪ್ರಮಾಣದ ಪುಸ್ತಕದಲ್ಲಿ ಬರೆಯದ ರೋಗಗಳನ್ನೂ ಬೇನೆಗಳನ್ನೂ ಕರ್ತನು ನಿನ್ನ ಮೇಲೆ ತರುವನು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 28

59ಕರ್ತನು ನಿನ್ನ ಬಾಧೆಗಳನ್ನೂ ನಿನ್ನ ಸಂತತಿಯ ಬಾಧೆಗಳನ್ನೂ ಆಶ್ಚರ್ಯವಾಗ ಮಾಡುವನು; ಅವು ದೊಡ್ಡದಾದ ಮತ್ತು ಸ್ಥಿರವಾದ ಬಾಧೆಗಳೂ ಘೋರ ವಾದ ಮತ್ತು ಸ್ಥಿರವಾದ ರೋಗಗಳೂ ಆಗುವವು.

60ಇದಲ್ಲದೆ ನೀನು ಹೆದರಿಕೊಂಡ ಐಗುಪ್ತದ ರೋಗ ಗಳನ್ನೆಲ್ಲಾ ಆತನು ತಿರಿಗಿ ನಿನ್ನ ಮೇಲೆ ಬರಮಾಡು ವನು; ಅವು ನಿನ್ನನ್ನು ಅಂಟಿಕೊಳ್ಳುವವು.

61ನೀನು ಪೂರ್ಣವಾಗಿ ನಾಶವಾಗುವ ವರೆಗೆ ಈ ನ್ಯಾಯ ಪ್ರಮಾಣದ ಪುಸ್ತಕದಲ್ಲಿ ಬರೆಯದ ರೋಗಗಳನ್ನೂ ಬೇನೆಗಳನ್ನೂ ಕರ್ತನು ನಿನ್ನ ಮೇಲೆ ತರುವನು.

62ಆಗ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ಇರುವದರಿಂದ ನೀವು ಅಸಂಖ್ಯವಾದ ಆಕಾಶದ ನಕ್ಷತ್ರಗಳ ಹಾಗಿದ್ದದ್ದಕ್ಕೆ ಬದಲಾಗಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ.

63ಆಗುವದೇನಂದರೆ, ಕರ್ತನು ಹೇಗೆ ನಿಮಗೆ ಒಳ್ಳೇದನ್ನು ಮಾಡುವದಕ್ಕೂ ನಿಮ್ಮನ್ನು ಹೆಚ್ಚಿಸು ವದಕ್ಕೂ ನಿಮಗೋಸ್ಕರ ಸಂತೋಷಿಸಿದನೋ ಹಾಗೆ ಕರ್ತನು ನಿಮ್ಮನ್ನು ಕೆಡಿಸುವದಕ್ಕೂ ನಿಮ್ಮನ್ನು ನಾಶ ಮಾಡುವದಕ್ಕೂ ನಿಮಗೆ ವಿರೋಧವಾಗಿ ಸಂತೋಷಿ ಸುವನು; ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಿಂದ ನೀನು ಕೀಳಲ್ಪಡುವಿ.

ಧರ್ಮೋಪದೇಶಕಾಂಡ 28 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी