ಯೆರೆಮಿಯ 22:2

ಹೇಗಂದರೆ--ದಾವೀ ದನ ಸಿಂಹಾಸನದ ಮೇಲೆ ಕೂತುಕೊಳ್ಳುವ ಯೆಹೂದದ ಅರಸನೇ, ನೀನೂ ನಿನ್ನ ಸೇವಕರೂ ಈ ಬಾಗಿಲುಗಳಿಂದ ಪ್ರವೇಶಿಸುವ ನಿನ್ನ ಜನರೂ ಕರ್ತನ ವಾಕ್ಯವನ್ನು ಕೇಳಲಿ, ಕರ್ತನು ಹೇಳುವದೇನಂದರೆ--

ಸಂದರ್ಭದೊಂದಿಗೆ ಓದಿ · ಯೆರೆಮಿಯ 22

1ಕರ್ತನು ಹೀಗೆ ಹೇಳುತ್ತಾನೆ--ಯೆಹೂದದ ಅರಸನ ಮನೆಗೆ ಇಳಿದು ಹೋಗಿ ಅಲ್ಲಿ ಈ ವಾಕ್ಯವನ್ನು ಹೇಳು.

2ಹೇಗಂದರೆ--ದಾವೀ ದನ ಸಿಂಹಾಸನದ ಮೇಲೆ ಕೂತುಕೊಳ್ಳುವ ಯೆಹೂದದ ಅರಸನೇ, ನೀನೂ ನಿನ್ನ ಸೇವಕರೂ ಈ ಬಾಗಿಲುಗಳಿಂದ ಪ್ರವೇಶಿಸುವ ನಿನ್ನ ಜನರೂ ಕರ್ತನ ವಾಕ್ಯವನ್ನು ಕೇಳಲಿ, ಕರ್ತನು ಹೇಳುವದೇನಂದರೆ--

3ನ್ಯಾಯವನ್ನೂ ನೀತಿಯನ್ನೂ ನಡಿಸಿರಿ; ಸುಲಿಗೆಯಾದ ವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಪರದೇಶಸ್ಥನಿಗೆ ದಿಕ್ಕಿಲ್ಲದವನಿಗೆ ವಿಧವೆಗೆ ಉಪದ್ರವವ ನ್ನಾದರೂ ಬಲಾತ್ಕಾರವನ್ನಾದರೂ ಮಾಡಬೇಡಿರಿ; ಇಲ್ಲವೆ ಈ ಸ್ಥಳದಲ್ಲಿ ನಿರಪರಾಧದ ರಕ್ತವನ್ನು ಚೆಲ್ಲ ಬೇಡಿರಿ.

4ನೀವು ನಿಶ್ಚಯವಾಗಿ ಈ ಕಾರ್ಯವನ್ನು ಮಾಡಿದರೆ ದಾವೀದನ ಸಿಂಹಾಸನದ ಮೇಲೆ ಕೂತುಕೊಳ್ಳು ವವರೂ ರಥಗಳಲ್ಲಿಯೂ ಕುದುರೆಗಳ ಮೇಲೆಯೂ ಸವಾರಿಮಾಡುವ ಅರಸರ ತಮ್ಮ ಸೇವಕರ ಜನರ ಸಹಿತವಾಗಿ, ಈ ಮನೆಯ ಬಾಗಿಲುಗಳಿಂದ ಪ್ರವೇಶಿಸು ವರು.

ಯೆರೆಮಿಯ 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी