ಲೂಕನು 12:43

ತನ್ನ ಒಡೆಯನು ಬಂದಾಗ ಯಾವನು ಹೀಗೆ ಮಾಡುವದನ್ನು ಕಾಣುವನೋ ಆ ಸೇವಕನು ಧನ್ಯನು;

ಸಂದರ್ಭದೊಂದಿಗೆ ಓದಿ · ಲೂಕನು 12

41ಆಗ ಪೇತ್ರನು ಆತನಿಗೆ--ಕರ್ತನೇ, ನೀನು ಈ ಸಾಮ್ಯವನ್ನು ನಮಗೆ ಹೇಳುತ್ತೀಯೋ ಇಲ್ಲವೆ ಎಲ್ಲರಿಗೂ ಹೇಳುತ್ತೀಯೋ ಎಂದು ಕೇಳಿದ್ದಕ್ಕೆ

42ಕರ್ತನು--ಹಾಗಾದರೆ ತಕ್ಕಕಾಲದಲ್ಲಿ ಅವರ ಪಾಲಿನ ಆಹಾರವನ್ನು ಕೊಡುವದಕ್ಕಾಗಿ ಒಡೆಯನು ತನ್ನ ಮನೆಯಮೇಲೆ ನೇಮಿಸುವ ನಂಬಿಗಸ್ತನೂ ವಿವೇಕಿಯೂ ಆಗಿರುವ ಮನೇವಾರ್ತೆಯವನು ಯಾರು?

43ತನ್ನ ಒಡೆಯನು ಬಂದಾಗ ಯಾವನು ಹೀಗೆ ಮಾಡುವದನ್ನು ಕಾಣುವನೋ ಆ ಸೇವಕನು ಧನ್ಯನು;

44ಅವನು ತನಗಿರುವ ಎಲ್ಲಾದರ ಮೇಲೆ ಅವನನ್ನು ಅಧಿಕಾರಿಯನ್ನಾಗಿ ನೇಮಿಸುವನು ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.

45ಆದರೆ ಆ ಸೇವಕನು--ನನ್ನ ಒಡೆಯನು ಬರುವದಕ್ಕೆ ತಡಮಾಡುತ್ತಾನೆ ಎಂದು ತನ್ನ ಹೃದಯದಲ್ಲಿ ಅಂದು ಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯು ವದಕ್ಕೂ ತಿಂದು ಕುಡಿದು ಮತ್ತನಾಗುವದಕ್ಕೂ ಆರಂಭಿಸಿದರೆ

ಲೂಕನು 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी