ಯೆಹೆಜ್ಕೇಲನು 32:25

ಅವರು ಅದರ ಎಲ್ಲಾ ಸಮೂಹಕ್ಕೂ ಹತವಾದವರ ಮಧ್ಯದಲ್ಲಿ ಹಾಸಿಗೆ ಹಾಕಿದ್ದಾರೆ; ಅದರ ಸುತ್ತಲೂ ಅವರ ಸಮಾಧಿಗಳಿವೆ; ಅವರೆಲ್ಲರೂ ಕತ್ತಿಯಿಂದ ಹತರಾಗಿ ಸುನ್ನತಿಯಿಲ್ಲದವರಾಗಿದ್ದಾರೆ; ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದಾಗ್ಯೂ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತು ಕೊಂಡು ಹತರಾದವರ ಮಧ್ಯದಲ್ಲಿ ಇಡಲ್ಪಟ್ಟಿದ್ದಾರೆ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 32

23ಅವರ ಸಮಾಧಿಗಳು ಕುಣಿಯ ಕಡೆಗಳಲ್ಲಿ ಇಡಲ್ಪಟ್ಟಿವೆ, ಅದರ ಸಮಾಧಿಯ ಸುತ್ತಲೂ ಅವರ ಗುಂಪುಗಳಿವೆ. ಜೀವಿತರ ದೇಶದಲ್ಲಿ ಭಯಂಕ ರರಾಗಿದ್ದ ಇವರೆಲ್ಲರೂ ಕತ್ತಿಯಿಂದ ಬಿದ್ದು ಹತರಾ ದರು.

24ಅಲ್ಲಿ ಏಲಾಮು ಮತ್ತು ಅದರ ಎಲ್ಲಾ ಸಮೂಹವು ಆಕೆಯ ಸಮಾಧಿಯ ಸುತ್ತಲೂ ಇದೆ; ಅವರೆಲ್ಲರೂ ಕತ್ತಿಯಿಂದ ಬಿದ್ದು ಹತರಾದವರೇ; ಸುನ್ನತಿಯಿಲ್ಲದವರಾಗಿ ಭೂಮಿಯ ಕೆಳಗಿನ ಭಾಗಗಳಿಗೆ ಇಳಿದುಹೋದವರೇ, ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದಾಗ್ಯೂ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತುಕೊಂಡಿದ್ದಾರೆ.

25ಅವರು ಅದರ ಎಲ್ಲಾ ಸಮೂಹಕ್ಕೂ ಹತವಾದವರ ಮಧ್ಯದಲ್ಲಿ ಹಾಸಿಗೆ ಹಾಕಿದ್ದಾರೆ; ಅದರ ಸುತ್ತಲೂ ಅವರ ಸಮಾಧಿಗಳಿವೆ; ಅವರೆಲ್ಲರೂ ಕತ್ತಿಯಿಂದ ಹತರಾಗಿ ಸುನ್ನತಿಯಿಲ್ಲದವರಾಗಿದ್ದಾರೆ; ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದಾಗ್ಯೂ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತು ಕೊಂಡು ಹತರಾದವರ ಮಧ್ಯದಲ್ಲಿ ಇಡಲ್ಪಟ್ಟಿದ್ದಾರೆ.

26ಅಲ್ಲಿ ಮೇಷೆಕೂ ತೂಬಲೂ ಮತ್ತು ಅದರ ಎಲ್ಲಾ ಸಮೂಹವೂ ಅದರ ಸಮಾಧಿಗಳೂ ಅದರ ಸುತ್ತಲಾಗಿ ಇವೆ ಇವರೆಲ್ಲರೂ ಜೀವಿತರ ದೇಶದಲ್ಲಿ ಭಯಂಕರರಾಗಿ ದ್ದಾಗ್ಯೂ ಸುನ್ನತಿಯಿಲ್ಲದೆ ಕತ್ತಿಯಿಂದ ಹತರಾದವರು.

27ಸುನ್ನತಿಯಿಲ್ಲದವರಲ್ಲಿ ಬಿದ್ದಂತ ತಮ್ಮ ಯುದ್ಧದ ಆಯುಧಗಳ ಸಂಗಡ ಪಾತಾಳಕ್ಕೆ ಇಳಿದಂತ ಶೂರರ ಸಂಗಡ ಇವರು ಮಲಗಬೇಡವೇ? ಅವರು ತಮ್ಮ ಕತ್ತಿಗಳನ್ನು ತಮ್ಮ ತಲೆಗಳ ಕೆಳಗೆ ಇಟ್ಟುಕೊಂಡಿದ್ದಾರೆ; ಅವರು ಜೀವಿತರ ದೇಶದಲ್ಲಿ ಶೂರರಿಗೆ ಭಯಂಕರ ರಾಗಿದ್ದಾಗ್ಯೂ ಅವರ ಅಕ್ರಮಗಳು ಅವರ ಎಲುಬು ಗಳ ಮೇಲೆ ಇರುವವು.

ಯೆಹೆಜ್ಕೇಲನು 32 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी