ಯೆಶಾಯ 50:7

ಕರ್ತನಾದ ದೇವರು ನನಗೆ ಸಹಾಯ ಮಾಡುವನು; ಆದಕಾರಣ ನಾನು ಆಶಾಭಂಗಪಡುವ ದಿಲ್ಲ; ಆದದರಿಂದ ನನ್ನ ಮುಖವನ್ನು ಬೆಣಚುಕಲ್ಲಿನಂತೆ ಮಾಡಿಕೊಂಡಿದ್ದೇನೆ; ನಾನು ನಾಚಿಕೆಪಡಲಾರೆನೆಂದು ನನಗೆ ಗೊತ್ತು.

ಸಂದರ್ಭದೊಂದಿಗೆ ಓದಿ · ಯೆಶಾಯ 50

5ಕರ್ತನಾದ ದೇವರು ನನ್ನ ಕಿವಿಯನ್ನು ತೆರೆದಿದ್ದಾನೆ. ನಾನು ಎದುರುಬೀಳಲಿಲ್ಲ ಇಲ್ಲವೆ ವಿಮುಖನಾಗಲೂ ಇಲ್ಲ.

6ನಾನು ಹೊಡೆಯುವವರಿಗೆ ಬೆನ್ನನ್ನು ಮತ್ತು ಕೂದಲು ಕೀಳುವವರಿಗೆ ನನ್ನ ಕೆನ್ನೆಯನ್ನು ಕೊಟ್ಟೆನು; ನನ್ನ ಮುಖವನ್ನು ನಿಂದೆಗೂ ಉಗುಳುವಿಕೆಗೂ ಮರೆ ಮಾಡಲಿಲ್ಲ.

7ಕರ್ತನಾದ ದೇವರು ನನಗೆ ಸಹಾಯ ಮಾಡುವನು; ಆದಕಾರಣ ನಾನು ಆಶಾಭಂಗಪಡುವ ದಿಲ್ಲ; ಆದದರಿಂದ ನನ್ನ ಮುಖವನ್ನು ಬೆಣಚುಕಲ್ಲಿನಂತೆ ಮಾಡಿಕೊಂಡಿದ್ದೇನೆ; ನಾನು ನಾಚಿಕೆಪಡಲಾರೆನೆಂದು ನನಗೆ ಗೊತ್ತು.

8ನನಗೆ ನೀತಿ ನಿರ್ಣಯಿಸುವಾತನು ಸವಿಾಪದಲ್ಲಿಯೇ ಇದ್ದಾನೆ; ನನ್ನೊಂದಿಗೆ ಹೋರಾಡು ವವನು ಯಾರು? ನಾವು ಒಟ್ಟಿಗೆ ನಿಂತುಕೊಳ್ಳೋಣ, ನನ್ನ ಎದುರಾಳಿ ಯಾರು? ಅವನು ನನ್ನ ಸವಿಾಪಕ್ಕೆ ಬರಲಿ.

9ಇಗೋ, ಕರ್ತನಾದ ದೇವರು ನನಗೆ ಸಹಾಯ ಮಾಡುವನು; ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು? ಇಗೋ, ಅವರೆಲ್ಲರೂ ಹಳೆಯ ಬಟ್ಟೆಯಂತಾಗುವರು; ಬಟ್ಟೆ ತಿನ್ನುವ ನುಸಿಯು ಅವರನ್ನು ತಿಂದುಬಿಡುವದು.

ಯೆಶಾಯ 50 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी