ಮಿಕ 6:6

ನಾನು ಯಾವದರೊಂದಿಗೆ ಕರ್ತನ ಮುಂದೆ ಬರಲಿ? ಯಾವದರೊಂದಿಗೆ ಉನ್ನತವಾದ ದೇವರ ಮುಂದೆ ಅಡ್ಡಬೀಳಲಿ? ದಹನಬಲಿಗಳ ಸಂಗಡವೂ ಒಂದು ವರುಷದ ಕರುಗಳ ಸಂಗಡವೂ ಆತನ ಮುಂದೆ ಬರಲೋ?

ಸಂದರ್ಭದೊಂದಿಗೆ ಓದಿ · ಮಿಕ 6

4ನಾನು ಐಗುಪ್ತದೇಶದೊಳಗಿಂದ ನಿನ್ನನ್ನು ಮೇಲೆ ಬರಮಾಡಿ, ದಾಸರ ಮನೆಯೊಳಗಿಂದ ನಿನ್ನನ್ನು ವಿಮೋ ಚಿಸಿ, ಮೋಶೆಯನ್ನೂ ಆರೋನನನ್ನೂ ಮಿರಿಯಾಮ ಳನ್ನೂ ನಿನ್ನ ಮುಂದೆ ಕಳುಹಿಸಿದೆನು.

5ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಯೋಚಿಸಿ ದ್ದನ್ನೂ ಬೆಯೋರನ ಮಗನಾದ ಬಿಳಾಮನು ಅವನಿಗೆ ಉತ್ತರವಾಗಿ ಹೇಳಿದ್ದನ್ನೂ ಶಿಟ್ಟೀಮು ಮೊದಲು ಗೊಂಡು ಗಿಲ್ಗಾಲಿನ ವರೆಗೂ ಆದದ್ದನ್ನೂ ಈಗ ಜ್ಞಾಪಕ ಮಾಡಿಕೊಳ್ಳಿರಿ. ಆಗ ಕರ್ತನ ನೀತಿಯನ್ನು ತಿಳುಕೊಳ್ಳು ವಿರಿ.

6ನಾನು ಯಾವದರೊಂದಿಗೆ ಕರ್ತನ ಮುಂದೆ ಬರಲಿ? ಯಾವದರೊಂದಿಗೆ ಉನ್ನತವಾದ ದೇವರ ಮುಂದೆ ಅಡ್ಡಬೀಳಲಿ? ದಹನಬಲಿಗಳ ಸಂಗಡವೂ ಒಂದು ವರುಷದ ಕರುಗಳ ಸಂಗಡವೂ ಆತನ ಮುಂದೆ ಬರಲೋ?

7ಸಾವಿರ ಟಗರುಗಳಿಗಾದರೂ ಎಣ್ಣೆಯ ಹತ್ತು ಸಾವಿರ ನದಿಗಳಿಗಾದರೂ ಕರ್ತನು ಮೆಚ್ಚು ವನೋ? ನನ್ನ ದ್ರೋಹಕ್ಕಾಗಿ ನನ್ನ ಚೊಚ್ಚಲ ಮಗ ನನ್ನೂ ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲ ವನ್ನೂ ಕೊಡಲೋ?

8ಮನುಷ್ಯನೇ, ಉತ್ತಮವಾದ ದ್ದನ್ನು ನಿನಗೆ ಆತನು ತಿಳಿಸಿದ್ದಾನೆ; ಹೌದು, ನ್ಯಾಯ ವನ್ನು ಮಾಡುವದೂ ಕರುಣೆಯನ್ನು ಪ್ರೀತಿಮಾಡು ವದೂ ನಿನ್ನ ದೇವರ ಸಂಗಡ ವಿನಯವಾಗಿ ನಡ ಕೊಳ್ಳುವದೂ ಇದನ್ನೇ ಹೊರತು ಕರ್ತನು ಇನ್ನೇನು ನಿನ್ನಿಂದ ಕೇಳುತ್ತಾನೆ.

ಮಿಕ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी