ವಿಮೋಚನಕಾಂಡ 19:18

ಕರ್ತನು ಅಗ್ನಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದದ್ದರಿಂದ ಆ ಬೆಟ್ಟದಲ್ಲೆಲ್ಲಾ ಹೊಗೆ ಹಾಯುತ್ತಿತ್ತು. ಅದರ ಹೊಗೆಯು ಆವಿಗೆಯ ಹೊಗೆ ಯಂತೆ ಏರಿ ಬರುತ್ತಾ ಇತ್ತು. ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 19

16ಮೂರನೆಯ ದಿನದಲ್ಲಿ ಉದಯವಾದಾಗ ಬೆಟ್ಟದ ಮೇಲೆ ಗುಡುಗುಗಳೂ ಮಿಂಚುಗಳೂ ಮಂದವಾದ ಮೇಘವೂ ಉಂಟಾಗಿ ಬಹು ಬಲವಾದ ತುತೂರಿಯ ಶಬ್ದವಾಯಿತು. ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿ ದರು.

17ಆಗ ಮೋಶೆಯು ಜನರನ್ನು ಪಾಳೆಯ ದೊಳಗಿಂದ ದೇವರನ್ನು ಸಂಧಿಸುವದಕ್ಕೆ ಹೊರಗೆ ಬರಮಾಡಿದನು; ಆಗ ಅವರು ಬೆಟ್ಟದ ಕೆಳಗೆ ನಿಂತು ಕೊಂಡರು.

18ಕರ್ತನು ಅಗ್ನಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದದ್ದರಿಂದ ಆ ಬೆಟ್ಟದಲ್ಲೆಲ್ಲಾ ಹೊಗೆ ಹಾಯುತ್ತಿತ್ತು. ಅದರ ಹೊಗೆಯು ಆವಿಗೆಯ ಹೊಗೆ ಯಂತೆ ಏರಿ ಬರುತ್ತಾ ಇತ್ತು. ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.

19ತುತೂರಿಯ ಶಬ್ದವು ಬರಬರುತ್ತಾ ಹೆಚ್ಚಾಗುತಿತ್ತು. ಮೋಶೆಯು ಮಾತನಾಡಿದಾಗ ದೇವರು ಅವನಿಗೆ ತನ್ನ ಸ್ವರದಿಂದ ಉತ್ತರಕೊಟ್ಟನು.

20ಆಗ ಕರ್ತನು ಸೀನಾಯಿ ಬೆಟ್ಟದ ತುದಿಗೆ ಇಳಿದು ಬಂದು ಮೋಶೆಯನ್ನು ತನ್ನ ಬಳಿಗೆ ಕರೆದನು, ಮೋಶೆಯು ಮೇಲೆ ಹೋದನು.

ವಿಮೋಚನಕಾಂಡ 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी