ಸಾಲೇಮಿನ ಅರಸನಾದ ಮೆಲ್ಕೀಚೆದೇಕನು ರೊಟ್ಟಿಯನ್ನೂ ದ್ರಾಕ್ಷಾ ರಸವನ್ನೂ ತಂದನು. ಇವನು ಮಹೋನ್ನತನಾದ ದೇವರ ಯಾಜಕನು.
16ಸಂಪತ್ತನ್ನೆಲ್ಲಾ ಹಿಂದಕ್ಕೆ ತೆಗೆದುಕೊಂಡು ಬಂದನು. ತನ್ನ ಸಹೋದರನಾದ ಲೋಟನನ್ನೂ ಅವನ ಸಂಪತ್ತನ್ನೂ ಸ್ತ್ರೀಯರನ್ನೂ ಜನರನ್ನೂ ಹಿಂದಕ್ಕೆ ತಕ್ಕೊಂಡು ಬಂದನು.
17ಅವನು ಕೆದೊರ್ಲಗೋಮರನನ್ನು ಅವನ ಸಂಗಡ ಇದ್ದ ಅರಸರನ್ನು ಸಂಹರಿಸಿ ಹಿಂತಿರುಗಿ ಬಂದ ಮೇಲೆ ಸೊದೋಮಿನ ಅರಸನು ಹೊರಟು ಶಾವೆ ಎಂಬ ಅರಸನ ತಗ್ಗಿನ ವರೆಗೆ ಅಬ್ರಾಮನನ್ನು ಎದುರುಗೊಳ್ಳುವದಕ್ಕಾಗಿ ಬಂದನು.
18ಸಾಲೇಮಿನ ಅರಸನಾದ ಮೆಲ್ಕೀಚೆದೇಕನು ರೊಟ್ಟಿಯನ್ನೂ ದ್ರಾಕ್ಷಾ ರಸವನ್ನೂ ತಂದನು. ಇವನು ಮಹೋನ್ನತನಾದ ದೇವರ ಯಾಜಕನು.
19ಇವನು ಅಬ್ರಾಮನನ್ನು ಆಶೀರ್ವದಿಸಿ--ಅಬ್ರಾಮನು ಆಕಾಶವನ್ನು ಭೂಮಿ ಯನ್ನು ಹೊಂದಿರುವ ಮಹೋನ್ನತನಾದ ದೇವರಿಂದ ಆಶೀರ್ವದಿಸಲ್ಪಡಲಿ.
20ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ ಮಹೋನ್ನತ ನಾದ ದೇವರು ಸ್ತುತಿಹೊಂದಲಿ ಅಂದನು. ಅಬ್ರಾ ಮನು ಅವನಿಗೆ ಎಲ್ಲಾದರಲ್ಲಿ ದಶಮಭಾಗವನ್ನು ಕೊಟ್ಟನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ