೨ ಪೂರ್ವಕಾಲವೃತ್ತಾಂತ 10:9

ನಿನ್ನ ತಂದೆಯು ನಮ್ಮ ಮೇಲೆ ಹಾಕಿದ ನೊಗವನ್ನು ಹಗುರ ಮಾಡೆಂದು ನನಗೆ ಹೇಳಿದ ಈ ಜನರಿಗೆ ಪ್ರತ್ಯುತ್ತರಕೊಡಲು ನೀವು ಯಾವ ಯೋಚನೆ ಹೇಳುತ್ತೀರಿ ಅಂದನು.

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 10

7ಅವರು ಅವ ನಿಗೆ--ನೀನು ಈ ಜನರಿಗೆ ದಯವುಳ್ಳವನಾಗಿ ಅವ ರನ್ನು ಮೆಚ್ಚಿಸಿ ಅವರಿಗೆ ಒಳ್ಳೇ ಮಾತುಗಳನ್ನು ಆಡಿದರೆ ಅವರು ಎಂದೆಂದಿಗೂ ನಿನ್ನ ಸೇವಕರಾಗಿರುವರು ಅಂದರು.

8ಆದರೆ ಹಿರಿಯರು ತನಗೆ ಹೇಳಿದ ಆಲೋಚನೆಯನ್ನು ಬಿಟ್ಟು ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋಚನೆಯನ್ನು ಅವನು ಕೇಳಿ ಅವರಿಗೆ--

9ನಿನ್ನ ತಂದೆಯು ನಮ್ಮ ಮೇಲೆ ಹಾಕಿದ ನೊಗವನ್ನು ಹಗುರ ಮಾಡೆಂದು ನನಗೆ ಹೇಳಿದ ಈ ಜನರಿಗೆ ಪ್ರತ್ಯುತ್ತರಕೊಡಲು ನೀವು ಯಾವ ಯೋಚನೆ ಹೇಳುತ್ತೀರಿ ಅಂದನು.

10ಆಗ ಅವನ ಕೂಡ ಬೆಳೆದ ಯೌವನಸ್ಥರು ಅವ ನಿಗೆ--ನಿನ್ನ ತಂದೆಯು ನಮ್ಮ ನೊಗವನ್ನು ಭಾರ ಮಾಡಿದನು; ಆದರೆ ನೀನು ಅದನ್ನು ನಮಗೆ ಹಗುರ ಮಾಡೆಂದು

11ನಿನ್ನ ಸಂಗಡ ಮಾತನಾಡಿ ಹೇಳಿದ ಈ ಜನರಿಗೆ ನೀನು ಹೀಗೆ ಹೇಳಬೇಕು--ನನ್ನ ಕಿರು ಬೆರಳು ನನ್ನ ತಂದೆಯ ನಡುವಿಗಿಂತ ದಪ್ಪವಾಗಿರು ವದು. ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು; ನಾನಾದರೋ ನಿಮ್ಮ ನೊಗವನ್ನು ಹೆಚ್ಚು ಭಾರವಾಗಿ ಮಾಡುವೆನು. ನನ್ನ ತಂದೆಯು ನಿಮ್ಮನ್ನು ಬೆತ್ತಗಳಿಂದ ಶಿಕ್ಷಿಸಿದನು; ಆದರೆ ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಎಂದು ಹೇಳು ಅಂದರು.

೨ ಪೂರ್ವಕಾಲವೃತ್ತಾಂತ 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी