ಆಸನು ತನ್ನ ದೇವರಾದ ಕರ್ತನ ದೃಷ್ಟಿಯಲ್ಲಿ ಒಳ್ಳೇದನ್ನೂ ಸರಿಯಾದದ್ದನ್ನೂ ಮಾಡಿದನು.
1ಅಬೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನು ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗನಾದ ಆಸನು ಅವನಿಗೆ ಬದಲಾಗಿ ಆಳಿದನು. ಅವನ ದಿವಸಗಳಲ್ಲಿ ಹತ್ತು ವರುಷ ದೇಶವು ಶಾಂತವಾಗಿತ್ತು,
2ಆಸನು ತನ್ನ ದೇವರಾದ ಕರ್ತನ ದೃಷ್ಟಿಯಲ್ಲಿ ಒಳ್ಳೇದನ್ನೂ ಸರಿಯಾದದ್ದನ್ನೂ ಮಾಡಿದನು.
3ಅವನು ಅನ್ಯದೇವರು ಗಳ ಬಲಿಪೀಠಗಳನ್ನೂ ಉನ್ನತ ಸ್ಥಳಗಳನ್ನೂ ತೆಗೆದು ಹಾಕಿ ವಿಗ್ರಹಗಳನ್ನು ಒಡೆದುಬಿಟ್ಟು ಅವುಗಳ ತೋಪು ಗಳನ್ನು ಕಡಿದುಹಾಕಿ,
4ತಮ್ಮ ಪಿತೃಗಳ ದೇವರಾದ ಕರ್ತನನ್ನು ಹುಡುಕಲೂ ನ್ಯಾಯಪ್ರಮಾಣವನ್ನು ಆಜ್ಞೆಯನ್ನು ಕೈಕೊಳ್ಳಲೂ ಯೆಹೂದ್ಯರಿಗೆ ಆಜ್ಞಾಪಿ ಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ