ಅನ್ಯಜನಾಂಗಗಳು ನಿನ್ನ ಪ್ರಕಾಶಕ್ಕೂ ಅರಸರು ನಿನ್ನ ಉದಯದ ಕಾಂತಿಗೂ ಬರುವರು.
1ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು.
2ಇಗೋ, ಕತ್ತಲೆ ಭೂಮಿಯನ್ನೂ ಗಾಢಾಂಧಕಾರವು ಜನಗಳನ್ನೂ ಮುಚ್ಚುವದು; ಆದರೆ ನಿನ್ನ ಮೇಲೆ ಕರ್ತನು ಉದಯಿ ಸುವನು; ಆತನ ಮಹಿಮೆಯು ನಿನ್ನ ಮೇಲೆ ಕಾಣ ಬರುವದು.
3ಅನ್ಯಜನಾಂಗಗಳು ನಿನ್ನ ಪ್ರಕಾಶಕ್ಕೂ ಅರಸರು ನಿನ್ನ ಉದಯದ ಕಾಂತಿಗೂ ಬರುವರು.
4ಸುತ್ತಲೂ ನಿನ್ನ ಕಣ್ಣುಗಳನ್ನೆತ್ತಿ ನೋಡು, ಅವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಾರೆ; ನಿನ್ನ ಕುಮಾ ರರು ದೂರದಿಂದ ಬರುವರು ನಿನ್ನ ಕುಮಾರ್ತೆಯರು ನಿನ್ನ ಪಕ್ಕೆಯಲ್ಲಿ ಪೋಷಣೆ ಹೊಂದುವರು.
5ಆಗ ನೀನು ಅದನ್ನು ನೋಡುವಿ, ನೀವು ಗುಂಪು ಗುಂಪಾಗಿ ಹೋಗುವಿರಿ. ನಿನ್ನ ಹೃದಯವು ಹೆದರಿ ವಿಶಾಲವಾಗು ವದು; ಸಮುದ್ರದ (ವ್ಯಾಪಾರದ) ಸಮೃದ್ಧಿಯು ನಿನ್ನ ಕಡೆಗೆ ತಿರುಗಿಕೊಳ್ಳುವದು; ಅನ್ಯಜನಾಂಗದ ಸೇನಾ ಬಲವು ನಿನ್ನ ಬಳಿಗೆ ಬರುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ