ಪ್ರಕಟನೆ 21:6

ಇದಲ್ಲದೆ ಆತನು ನನಗೆ--ಎಲ್ಲಾ ಮುಗಿಯಿತು. ನಾನು ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವದ ನೀರಿನ ಬುಗ್ಗೆಯಿಂದ ನಾನು ನೀರನ್ನು ಉಚಿತವಾಗಿ ಕೊಡುವೆನು.

ಸಂದರ್ಭದೊಂದಿಗೆ ಓದಿ · ಪ್ರಕಟನೆ 21

4ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣ ವಿರುವದಿಲ್ಲ. ಇನ್ನು ದುಃಖವಾಗಲಿ ಗೋಳಾಟವಾಗಲಿ ನೋವಾಗಲಿ ಇರುವದೇ ಇಲ್ಲ. ಮೊದಲಿದ್ದವುಗಳೆಲ್ಲಾ ಇಲ್ಲದೆ ಹೋದವು ಎಂದು ಹೇಳಿತು.

5ಆಗ ಸಿಂಹಾಸ ನದ ಮೇಲೆ ಕೂತಿದ್ದಾತನು--ಇಗೋ, ಎಲ್ಲವನ್ನು ನಾನು ಹೊಸದು ಮಾಡುತ್ತೇನೆ ಅಂದನು. ಆತನು ನನಗೆ--ಈ ಮಾತುಗಳು ಸತ್ಯವಾದವುಗಳು ನಂಬ ತಕ್ಕವುಗಳೂ ಆಗಿವೆ ಎಂಬದಾಗಿ ಬರೆ ಎಂದು ನನಗೆ ಹೇಳಿದನು.

6ಇದಲ್ಲದೆ ಆತನು ನನಗೆ--ಎಲ್ಲಾ ಮುಗಿಯಿತು. ನಾನು ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವದ ನೀರಿನ ಬುಗ್ಗೆಯಿಂದ ನಾನು ನೀರನ್ನು ಉಚಿತವಾಗಿ ಕೊಡುವೆನು.

7ಜಯಹೊಂದುವವನು ಎಲ್ಲವುಗಳಿಗೆ ಬಾಧ್ಯನಾಗುವನು; ನಾನು ಅವನ ದೇವರಾಗಿರುವೆನು. ಅವನು ನನ್ನ ಮಗನಾಗಿರುವನು.

8ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.

ಪ್ರಕಟನೆ 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी