ಆತನಲ್ಲಿ ಸರ್ವ ಸಂಪೂರ್ಣತೆಯು ವಾಸವಾಗಿರುವದು ತಂದೆಗೆ ಇಷ್ಟ ವಾಗಿತ್ತು.
17ಆತನು ಎಲ್ಲದಕ್ಕೂ ಮೊದಲು ಇದ್ದಾತನು; ಆತನು ಸಮಸ್ತಕ್ಕೂ ಆಧಾರನಾಗಿದ್ದಾನೆ.
18ಸಭೆಯೆಂಬ ದೇಹಕ್ಕೆ ಆತನು ಶಿರಸ್ಸಾಗಿದ್ದಾನೆ. ಆತನೇ ಆದಿಯಾಗಿದ್ದು ಎಲ್ಲಾದರಲ್ಲಿ ಪ್ರಮುಖನಾಗಿರುವಂತೆ ಆತನು ಸತ್ತವರೊಳಗಿಂದ ಬಂದ ಜ್ಯೇಷ್ಠನೂ ಆಗಿದ್ದಾನೆ.
19ಆತನಲ್ಲಿ ಸರ್ವ ಸಂಪೂರ್ಣತೆಯು ವಾಸವಾಗಿರುವದು ತಂದೆಗೆ ಇಷ್ಟ ವಾಗಿತ್ತು.
20ಆತನ ಶಿಲುಬೆಯ ರಕ್ತದಿಂದ ತಾನು ಸಮಾಧಾನವನ್ನು ಉಂಟುಮಾಡಿ ಆತನಿಂದ ಭೂಪರ ಲೋಕಗಳಲ್ಲಿರುವ ಎಲ್ಲವುಗಳನ್ನು ಆತನ ಮೂಲಕ ತನಗೆ ಸಂಧಾನಪಡಿಸಿಕೊಂಡನು.
21ಇದಲ್ಲದೆ ನೀವು ಹಿಂದಿನ ಕಾಲದಲ್ಲಿ ಅನ್ಯರೂ ದುಷ್ಕೃತ್ಯಗಳಿಂದ ದ್ವೇಷ ಮನಸ್ಸುಳ್ಳವರೂ ಆಗಿದ್ದಿರಿ. ಆದಾಗ್ಯೂ ಈಗ ಆತನು ನಿಮ್ಮನ್ನು ಸಂಧಾನಪಡಿಸಿ ಕೊಂಡಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ