ಸ್ತ್ರೀಯರ ಕೂದಲಿ ನಂತಿರುವ ಕೂದಲು ಅವುಗಳಿಗೆ ಇತ್ತು; ಅವುಗಳ ಹಲ್ಲುಗಳು ಸಿಂಹದ ಹಲ್ಲುಗಳ ಹಾಗಿದ್ದವು.
6ಆ ದಿನಗಳಲ್ಲಿ ಮನುಷ್ಯರು ಮರಣವನ್ನು ಹುಡುಕಿ ಅದನ್ನು ಕಾಣದೆ ಇರುವರು; ಸಾಯಬೇಕೆಂದು ಕೋರು ವರು, ಆದರೆ ಮೃತ್ಯುವು ಅವರ ಬಳಿಯಿಂದ ಓಡಿ ಹೋಗುವದು
7ಆ ಮಿಡಿತೆಗಳ ಆಕಾರಗಳು ಯುದ್ಧಕ್ಕೆ ಸನ್ನದ್ಧವಾಗಿರುವ ಕುದುರೆಗಳ ಆಕಾರದಂತೆ ಇದ್ದವು ಅವುಗಳ ತಲೆಯ ಮೇಲೆ ಚಿನ್ನದ ಕಿರೀಟಗಳೋ ಎಂಬಂತೆ ಇದ್ದವು; ಅವುಗಳ ಮುಖಗಳು ಮನುಷ್ಯರ ಮುಖಗಳ ಹಾಗೆ ಇದ್ದವು.
8ಸ್ತ್ರೀಯರ ಕೂದಲಿ ನಂತಿರುವ ಕೂದಲು ಅವುಗಳಿಗೆ ಇತ್ತು; ಅವುಗಳ ಹಲ್ಲುಗಳು ಸಿಂಹದ ಹಲ್ಲುಗಳ ಹಾಗಿದ್ದವು.
9ಅವುಗಳಿಗೆ ಕಬ್ಬಿಣದ ಕವಚಗಳಂತಿದ್ದ ಕವಚಗಳು ಇದ್ದವು; ಅವುಗಳ ರೆಕ್ಕೆಗಳ ಶಬ್ದವು ಯುದ್ಧಕ್ಕೆ ಓಡುವ ಅನೇಕ ರಥಾಶ್ವಗಳ ಶಬ್ದದ ಹಾಗೆ ಇತ್ತು.
10ಚೇಳಿಗಿರುವಂತೆ ಅವುಗಳಿಗೆ ಬಾಲಗಳೂ ಆ ಬಾಲಗಳಲ್ಲಿ ಕೊಂಡಿಗಳೂ ಇದ್ದವು; ಮನುಷ್ಯರನ್ನು ಐದು ತಿಂಗಳುಗಳ ವರೆಗೂ ಬಾಧಿಸುವ ಬಲವು ಅವುಗಳಿಗೆ ಇತ್ತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ