ಅರಣ್ಯಕಾಂಡ 14:38

ಆದರೆ ದೇಶವನ್ನು ಪರೀಕ್ಷಿಸುವದಕ್ಕೆ ಹೋದ ಮನುಷ್ಯರೊಳಗೆ ಇಬ್ಬರಾದ ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ಉಳಿದರು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 14

36ದೇಶವನ್ನು ಪರೀಕ್ಷಿಸುವದಕ್ಕೆ ಮೋಶೆ ಕಳುಹಿಸಿ ದವರು ಹಿಂದಿರುಗಿ ಆ ದೇಶದ ವಿಷಯವಾಗಿ ಕೆಟ್ಟಸುದ್ದಿ ಯನ್ನು ಎಬ್ಬಿಸಿ ಸಮಸ್ತ ಸಮೂಹವನ್ನು ಮೋಶೆಗೆ ವಿರೋಧವಾಗಿ ಗುಣುಗುಟ್ಟುವಂತೆ ಮಾಡಿ

37ದೇಶದ ಕೆಟ್ಟ ಸುದ್ದಿಯನ್ನು ಎಬ್ಬಿಸಿದ ಇವರೇ ಕರ್ತನ ಸನ್ನಿಧಿ ಯಲ್ಲಿ ವ್ಯಾಧಿಯಿಂದ ಸತ್ತರು.

38ಆದರೆ ದೇಶವನ್ನು ಪರೀಕ್ಷಿಸುವದಕ್ಕೆ ಹೋದ ಮನುಷ್ಯರೊಳಗೆ ಇಬ್ಬರಾದ ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ಉಳಿದರು.

39ಮೋಶೆಯು ಇಸ್ರಾಯೇಲ್‌ ಮಕ್ಕಳೆಲ್ಲರಿಗೆ ಈ ಮಾತುಗಳನ್ನು ಹೇಳಿದಾಗ ಜನರು ಬಹಳವಾಗಿ ದುಃಖಪಟ್ಟರು.

40ಮರುದಿವಸ ಬೆಳಿಗ್ಗೆ ಅವರು ಎದ್ದು ಬೆಟ್ಟದ ತುದಿಯ ಮೇಲಕ್ಕೆ ಏರಿ--ಇಗೋ, ಕರ್ತನು ವಾಗ್ದಾನ ಮಾಡಿದ ಸ್ಥಳಕ್ಕೆ ಏರಿ ಹೋಗುವದಕ್ಕೆ ಇದ್ದೇವೆ; ಯಾಕಂದರೆ ನಾವು ಪಾಪಮಾಡಿದ್ದೇವೆ ಅಂದರು.

ಅರಣ್ಯಕಾಂಡ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी