ಲೂಕನು 11:21

ಆಯುಧ ಗಳನ್ನು ಧರಿಸಿಕೊಂಡು ಬಲಿಷ್ಠನಾದವನೊಬ್ಬನು ತನ್ನ ಅರಮನೆಯನ್ನು ಕಾಯುವದಾದರೆ ಅವನ ಸೊತ್ತು ಸುರಕ್ಷಿತವಾಗಿರುವದು.

ಸಂದರ್ಭದೊಂದಿಗೆ ಓದಿ · ಲೂಕನು 11

19ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಬಿಡಿಸುವದಾದರೆ ನಿಮ್ಮ ಪುತ್ರರು ಯಾರಿಂದ ಅವುಗಳನ್ನು ಬಿಡಿಸುತ್ತಾರೆ? ಆದದರಿಂದ ಅವರೇ ನಿಮಗೆ ನ್ಯಾಯ ತೀರಿಸುವವರಾಗಿರುವರು.

20ಆದರೆ ನಾನು ದೇವರ ಹಸ್ತದಿಂದಲೇ ದೆವ್ವಗಳನ್ನು ಹೊರಡಿಸುವದಾದರೆ ದೇವರ ರಾಜ್ಯವು ನಿಸ್ಸಂದೇಹವಾಗಿ ನಿಮ್ಮ ಬಳಿಗೆ ಬಂದಿದೆಯಲ್ಲಾ.

21ಆಯುಧ ಗಳನ್ನು ಧರಿಸಿಕೊಂಡು ಬಲಿಷ್ಠನಾದವನೊಬ್ಬನು ತನ್ನ ಅರಮನೆಯನ್ನು ಕಾಯುವದಾದರೆ ಅವನ ಸೊತ್ತು ಸುರಕ್ಷಿತವಾಗಿರುವದು.

22ಆದರೆ ಅವನಿಗಿಂತ ಬಲಿ ಷ್ಠನು ಅವನ ಮೇಲೆ ಬಂದು ಅವನನ್ನು ಜಯಿಸಿ ಅವನು ನಂಬಿಕೊಂಡಿದ್ದ ಆಯುಧಗಳನ್ನು ಅವನಿಂದ ತಕ್ಕೊಂಡು ತನ್ನ ಸುಲಿಗೆಗಳನ್ನು ಹಂಚುವನು.

23ನನ್ನ ಜೊತೆಯಲ್ಲಿ ಇಲ್ಲದಿರುವವನು ನನಗೆ ವಿರೋಧವಾಗಿ ದ್ದಾನೆ; ನನ್ನೊಂದಿಗೆ ಕೂಡಿಸದೆ ಇರುವವನು ಚದರಿ ಸುತ್ತಾನೆ.

ಲೂಕನು 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी