ಮತ್ತಾಯನು 6:3

ಆದರೆ ನೀನು ದಾನಮಾಡುವಾಗ ನಿನ್ನ ಬಲಗೈ ಮಾಡುವದು ನಿನ್ನ ಎಡಗೈಗೆ ತಿಳಿಯದಿರಲಿ.

ಸಂದರ್ಭದೊಂದಿಗೆ ಓದಿ · ಮತ್ತಾಯನು 6

1ಜನರು ನೋಡಲಿ ಎಂದು ನೀವು ನಿಮ್ಮ ದಾನವನ್ನು ಅವರ ಮುಂದೆ ಮಾಡದಂತೆ ಎಚ್ಚರಿಕೆ ತಂದುಕೊಳ್ಳಿರಿ; ಇಲ್ಲವಾದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ಸಿಗಲಾರದು.

2ಆದದರಿಂದ ಕಪಟಿಗಳು ಜನರಿಂದ ಹೊಗಳಿಸಿ ಕೊಳ್ಳಬೇಕೆಂದು ಸಭಾಮಂದಿರಗಳಲ್ಲಿಯೂ ಬೀದಿಗಳ ಲ್ಲಿಯೂ ಮಾಡುವಂತೆ ನೀನು ದಾನ ಮಾಡುವಾಗ ನಿನ್ನ ಮುಂದೆ ತುತ್ತೂರಿಯನ್ನೂದಬೇಡ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿದ್ದಾರೆ.

3ಆದರೆ ನೀನು ದಾನಮಾಡುವಾಗ ನಿನ್ನ ಬಲಗೈ ಮಾಡುವದು ನಿನ್ನ ಎಡಗೈಗೆ ತಿಳಿಯದಿರಲಿ.

4ಹೀಗೆ ನಿನ್ನ ದಾನವು ಅಂತರಂಗದಲ್ಲಿರುವದು; ಮತ್ತು ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ತಾನೇ ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.

5ನೀನು ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಇರಬೇಡ; ಯಾಕಂದರೆ ಜನರು ನೋಡುವಂತೆ ಸಭಾಮಂದಿರಗಳಲ್ಲಿಯೂ ಬೀದಿಗಳ ಮೂಲೆಗಳ ಲ್ಲಿಯೂ ನಿಂತು ಪ್ರಾರ್ಥನೆಮಾಡುವದನ್ನು ಅವರು ಪ್ರೀತಿಸುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವ ದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿ ದ್ದಾರೆ.

ಮತ್ತಾಯನು 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी