ಆಮೇಲೆ ಚಿನ್ನದ ಧೂಪದ ಪಾತ್ರೆಯಿದ್ದ ಮತ್ತೊಬ್ಬ ದೂತನು ಬಂದು ಯಜ್ಞವೇದಿಯ ಬಳಿ ಯಲ್ಲಿ ನಿಂತನು; ಸಿಂಹಾಸನದ ಮುಂದೆ ಇದ್ದ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಸಮರ್ಪಿಸುವದಕ್ಕಾಗಿ ಅವನಿಗೆ ಬಹಳ ಧೂಪ ಕೊಡಲ್ಪಟ್ಟಿತು.
1ಆತನು ಏಳನೆಯ ಮುದ್ರೆಯನ್ನು ತೆರೆ ದಾಗ ಸುಮಾರು ಅರ್ಧಗಂಟೆ ಹೊತ್ತಿನವರೆಗೂ ಪರಲೋಕದಲ್ಲಿ ನಿಶ್ಯಬ್ದವಾಯಿತು.
2ಆಗ ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ಮಂದಿ ದೂತರನ್ನು ಕಂಡೆನು; ಅವರಿಗೆ ಏಳು ತುತೂರಿಗಳು ಕೊಡಲ್ಪಟ್ಟಿದ್ದವು.
3ಆಮೇಲೆ ಚಿನ್ನದ ಧೂಪದ ಪಾತ್ರೆಯಿದ್ದ ಮತ್ತೊಬ್ಬ ದೂತನು ಬಂದು ಯಜ್ಞವೇದಿಯ ಬಳಿ ಯಲ್ಲಿ ನಿಂತನು; ಸಿಂಹಾಸನದ ಮುಂದೆ ಇದ್ದ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಸಮರ್ಪಿಸುವದಕ್ಕಾಗಿ ಅವನಿಗೆ ಬಹಳ ಧೂಪ ಕೊಡಲ್ಪಟ್ಟಿತು.
4ಆಗ ಧೂಪದ ಹೊಗೆಯು ದೂತನ ಕೈಯೊಳಗಿಂದ ಹೊರಟು ಪರಿಶುದ್ಧರ ಪ್ರಾರ್ಥನೆಗಳೊಂದಿಗೆ ಕೂಡಿ ದೇವರ ಸನ್ನಿಧಾನಕ್ಕೆ ಏರಿಹೋಯಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ