ನನ್ನ ಪ್ರಿಯನು ಬಿಳುಪೂ ಕೆಂಪೂ ಉಳ್ಳವನು; ಹತ್ತು ಸಾವಿರ ಜನರಲ್ಲಿ ಮೇಲಾದವನು.
8ನಿಮಗೆ ಆಣೆ ಇಡುತ್ತೇನೆ, ಓ ಯೆರೂಸಲೇಮಿನ ಕುಮಾರ್ತೆ ಯರೇ--ನೀವು ನನ್ನ ಪ್ರಿಯನನ್ನು ಕಂಡರೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆಂದು ಅವನಿಗೆ ತಿಳಿಸಿರಿ.
9ಇತರ ಪ್ರಿಯನಿಗಿಂತ ನಿನ್ನ ಪ್ರಿಯನ ಅತಿಶಯ ವೇನು? ಸ್ತ್ರೀಯರಲ್ಲಿ ಅತಿ ಸುಂದರಿಯೇ, ನೀನು ನಮಗೆ ಹೀಗೆ ಆಣೆ ಇಡುವದಕ್ಕೆ ಇತರ ಪ್ರಿಯನಿಗಿಂತ ನಿನ್ನ ಪ್ರಿಯನ ಅತಿಶಯವೇನು?
10ನನ್ನ ಪ್ರಿಯನು ಬಿಳುಪೂ ಕೆಂಪೂ ಉಳ್ಳವನು; ಹತ್ತು ಸಾವಿರ ಜನರಲ್ಲಿ ಮೇಲಾದವನು.
11ಅವನ ತಲೆಯು ಅತಿ ಚೊಕ್ಕ ಬಂಗಾರದ ಹಾಗೆಯೂ ಅವನ ಕೂದಲು ಗುಂಗುರು ಕೂದಲೂ ಕಾಗೆಯ ಹಾಗೆ ಕಪ್ಪಾಗಿಯೂ ಅವೆ.
12ಅವನ ಕಣ್ಣುಗಳು ಯುಕ್ತವಾಗಿ ಇರಿಸಲ್ಪಟ್ಟು ಹಾಲಿನಿಂದ ತೊಳೆಯಲ್ಪಟ್ಟ ಜಲದ ಕಾಲಿವೆಗಳ ಬಳಿಯಲ್ಲಿರುವ ಪಾರಿವಾಳಗಳ ಕಣ್ಣುಗಳ ಹಾಗೆ ಅವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ