ನ್ಯಾಯಸ್ಥಾಪಕರು 2:18

ಕರ್ತನು ಅವರಿಗೆ ನ್ಯಾಯಾಧಿಪತಿಗಳನ್ನು ಎಬ್ಬಿಸಿ ಆತನು ನ್ಯಾಯಾಧಿಪತಿಯ ಸಂಗಡ ಇದ್ದು ಆ ನ್ಯಾಯಾಧಿಪತಿಯ ದಿನಗಳೆಲ್ಲಾ ಅವರನ್ನು ಅವರ ಶತ್ರುಗಳ ಕೈಯಿಂದ ರಕ್ಷಿಸುತ್ತಿದ್ದನು. ಯಾಕಂದರೆ ಅವರು ತಮ್ಮನ್ನು ಬಾಧಿಸಿ ಶ್ರಮೆಪಡಿಸುವವರ ನಿಮಿತ್ತ ಗೋಳಾಡುವದರಿಂದ ಕರ್ತನು ಪಶ್ಚಾತ್ತಾಪಪಟ್ಟನು.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 2

16ಆದಾಗ್ಯೂ ಕರ್ತನು ಅವರನ್ನು ಕೊಳ್ಳೆ ಹೊಡೆಯುವವರ ಕೈಯೊಳಗಿಂದ ಬಿಡಿಸಿದ ನ್ಯಾಯಾಧಿಪತಿಗಳನ್ನು ಎಬ್ಬಿಸಿದರೂ;

17ಅವರು ತಮ್ಮ ನ್ಯಾಯಾಧಿಪತಿಗಳ ಮಾತನ್ನು ಕೇಳದೆ ಅನ್ಯದೇವರುಗಳ ಹಿಂದೆ ಜಾರತ್ವಮಾಡಿ ಅವುಗಳಿಗೆ ಅಡ್ಡಬಿದ್ದು ತಮ್ಮ ತಂದೆಗಳು ಕರ್ತನ ಆಜ್ಞೆಗಳನ್ನು ಕೇಳಿ ನಡೆದ ಮಾರ್ಗವನ್ನು ಶೀಘ್ರವಾಗಿ ತೊರೆದು ಬಿಟ್ಟರು; ಅವರು ಮಾಡಿದ ಪ್ರಕಾರ ಮಾಡಲಿಲ್ಲ.

18ಕರ್ತನು ಅವರಿಗೆ ನ್ಯಾಯಾಧಿಪತಿಗಳನ್ನು ಎಬ್ಬಿಸಿ ಆತನು ನ್ಯಾಯಾಧಿಪತಿಯ ಸಂಗಡ ಇದ್ದು ಆ ನ್ಯಾಯಾಧಿಪತಿಯ ದಿನಗಳೆಲ್ಲಾ ಅವರನ್ನು ಅವರ ಶತ್ರುಗಳ ಕೈಯಿಂದ ರಕ್ಷಿಸುತ್ತಿದ್ದನು. ಯಾಕಂದರೆ ಅವರು ತಮ್ಮನ್ನು ಬಾಧಿಸಿ ಶ್ರಮೆಪಡಿಸುವವರ ನಿಮಿತ್ತ ಗೋಳಾಡುವದರಿಂದ ಕರ್ತನು ಪಶ್ಚಾತ್ತಾಪಪಟ್ಟನು.

19ಆ ನ್ಯಾಯಾಧಿಪತಿ ಸತ್ತಾಗ ಅವರು ತಿರುಗಿ ಮಾರ್ಗ ತಪ್ಪಿ ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದು ತಮ್ಮ ತಂದೆಗಳಿಗಿಂತ ಅಧಿಕವಾಗಿ ತಮ್ಮನ್ನು ಕೆಡಿಸಿಕೊಂಡು ತಮ್ಮ ಕೃತ್ಯಗಳನ್ನೂ ತಮ್ಮ ಕಾಠಿಣ್ಯದ ಮಾರ್ಗವನ್ನೂ ಬಿಡದೇ ಹೋದರು.

20ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಕೋಪದಿಂದ ಉರಿಗೊಂಡು--ನಾನು ಅವರ ತಂದೆ ಗಳಿಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ಈ ಜನಾಂಗವು ವಿಾರಿ ನನ್ನ ಮಾತನ್ನು ಕೇಳದೆ ಹೋದ ದರಿಂದ

ನ್ಯಾಯಸ್ಥಾಪಕರು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी