ಅದಕ್ಕೆ ಮೋಶೆಯು ತನ್ನ ಮಾವನಿಗೆ--ದೇವರ ವಿಷಯದಲ್ಲಿ ಕೇಳುವದಕ್ಕಾಗಿ ಜನರು ನನ್ನ ಬಳಿಗೆ ಬರುತ್ತಾರೆ.
13ಮರುದಿನದಲ್ಲಿ ಮೋಶೆಯು ಜನರಿಗೆ ನ್ಯಾಯತೀರಿಸುವದಕ್ಕೆ ಕೂತುಕೊಂಡಾಗ ಜನರು ಬೆಳಗಿನಿಂದ ಸಾಯಂಕಾಲದ ವರೆಗೆ ಮೋಶೆಯ ಬಳಿಯಲ್ಲಿ ನಿಂತಿ ದ್ದರು.
14ಮೋಶೆಯು ಜನರಿಗೆ ಮಾಡುವದನ್ನೆಲ್ಲಾ ಮೋಶೆಯ ಮಾವನು ನೋಡಿ ಮೋಶೆಗೆ--ಇದೇನು ಜನರಿಗೆ ನೀನು ಮಾಡುವದು? ಯಾಕೆ ನೀನೊಬ್ಬನೇ ಕೂತಿರಲಾಗಿ ಜನರು ಬೆಳಗಿನಿಂದ ಸಾಯಂಕಾಲದ ವರೆಗೆ ನಿನ್ನ ಬಳಿಯಲ್ಲಿ ನಿಂತಿದ್ದಾರೆ ಅಂದನು.
15ಅದಕ್ಕೆ ಮೋಶೆಯು ತನ್ನ ಮಾವನಿಗೆ--ದೇವರ ವಿಷಯದಲ್ಲಿ ಕೇಳುವದಕ್ಕಾಗಿ ಜನರು ನನ್ನ ಬಳಿಗೆ ಬರುತ್ತಾರೆ.
16ಅವರಿಗೆ ವ್ಯಾಜ್ಯವಿದ್ದರೆ ನನ್ನ ಬಳಿಗೆ ಬರುತ್ತಾರೆ. ನಾನು ಒಬ್ಬರ ಸಂಗಡ ಇನ್ನೊಬ್ಬರಿಗಿರುವ ವ್ಯಾಜ್ಯವನ್ನು ತೀರಿಸುತ್ತೇನೆ. ದೇವರ ನಿಯಮಗಳನ್ನೂ ಆತನ ನ್ಯಾಯ ಪ್ರಮಾಣಗಳನ್ನೂ ಅವರಿಗೆ ತಿಳಿಯಪಡಿಸುತ್ತೇನೆ ಅಂದನು.
17ಮೋಶೆಯ ಮಾವನು ಅವನಿಗೆ--ನೀನು ಮಾಡುವ ಈ ಕಾರ್ಯವು ಸರಿಯಲ್ಲ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ