ಎಸ್ತೇರಳು 3:13

ಒಂದೇ ದಿನದಲ್ಲಿ ಅಂದರೆ ಅಡಾರ್‌ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ ಹಿರಿಯರೂ ಕಿರಿಯರೂ ಮಕ್ಕಳೂ ಸ್ತ್ರೀಯರೂ ಸಹಿತವಾಗಿ ಎಲ್ಲಾ ಯೆಹೂದ್ಯರನ್ನು ಸಂಹರಿಸುವದಕ್ಕೂ ಕೊಂದುಹಾಕು ವದಕ್ಕೂ ನಾಶಮಾಡುವದಕ್ಕೂ ಅವರ ಆಸ್ತಿಯನ್ನು ಕೊಳ್ಳೆಹೊಡೆಯುವದಕ್ಕೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಅಂಚೆಯವರ ಮೂಲಕ ಪತ್ರಿಕೆಗಳು ಕಳುಹಿಸ ಲ್ಪಟ್ಟವು.

ಸಂದರ್ಭದೊಂದಿಗೆ ಓದಿ · ಎಸ್ತೇರಳು 3

11ಅರಸನು ಹಾಮಾನನಿಗೆ, ಬೆಳ್ಳಿಯನ್ನೂ ಆ ಜನವನ್ನೂ ನಿನಗೆ ಸರಿಯಾಗಿ ತೋರುವ ಹಾಗೆ ಅವರಿಗೆ ಮಾಡುವದಕ್ಕೆ ನಿನ್ನ ಕೈಯಲ್ಲಿ ಅವು ಒಪ್ಪಿಸ ಲ್ಪಟ್ಟಿವೆ ಅಂದನು.

12ಆಗ ಮೊದಲನೇ ತಿಂಗಳ ಹದಿಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಹಾಮಾನನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಪ್ರತಿ ಪ್ರಾಂತ್ಯದ ಮೇಲಿರುವ ಅರಸನ ಕೈ ಕೆಳಗಿನ ಉಪ ರಾಜರುಗಳಿಗೂ ಅಧಿಪತಿಗಳಿಗೂ ಪ್ರತಿ ಪ್ರಾಂತ್ಯದಲ್ಲಿ ಜನರ ಮೇಲಿರುವ ಅಧಿಕಾರಿಗೂ ಅದರದರ ಬರಹದ ಪ್ರಕಾರವಾಗಿಯೂ ಜನರ ಪ್ರತಿಯೊಬ್ಬರ ಭಾಷೆಯ ಪ್ರಕಾರವಾಗಿಯೂ ಬರೆಯಲ್ಪಟ್ಟಿತು. ಅದು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆಯಲ್ಪಟ್ಟು ಅರಸನ ಉಂಗುರದಿಂದ ಮುದ್ರೆ ಹಾಕಲ್ಪಟ್ಟಿತು.

13ಒಂದೇ ದಿನದಲ್ಲಿ ಅಂದರೆ ಅಡಾರ್‌ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ ಹಿರಿಯರೂ ಕಿರಿಯರೂ ಮಕ್ಕಳೂ ಸ್ತ್ರೀಯರೂ ಸಹಿತವಾಗಿ ಎಲ್ಲಾ ಯೆಹೂದ್ಯರನ್ನು ಸಂಹರಿಸುವದಕ್ಕೂ ಕೊಂದುಹಾಕು ವದಕ್ಕೂ ನಾಶಮಾಡುವದಕ್ಕೂ ಅವರ ಆಸ್ತಿಯನ್ನು ಕೊಳ್ಳೆಹೊಡೆಯುವದಕ್ಕೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಅಂಚೆಯವರ ಮೂಲಕ ಪತ್ರಿಕೆಗಳು ಕಳುಹಿಸ ಲ್ಪಟ್ಟವು.

14ಅವರು ಆ ದಿನಕ್ಕೆ ಸಿದ್ಧವಾಗಿರುವ ಹಾಗೆ ಪ್ರತಿ ಪ್ರಾಂತ್ಯದಲ್ಲಿ ಕಟ್ಟಳೆಯಾಗಿ ಬರೆದ ಪತ್ರಿಕೆಯು ಎಲ್ಲಾ ಜನಗಳಿಗೆ ಪ್ರಸಿದ್ಧ ಮಾಡಲ್ಪಟ್ಟಿತು.

15ಅಂಚೆ ಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಹೊರಟು ಹೋದರು. ಶೂಷನ್‌ ಅರಮನೆಯಲ್ಲಿ ಆ ಆಜ್ಞೆಯು ಕೊಡಲ್ಪಟ್ಟಿತು. ಅರಸನೂ ಹಾಮಾನನೂ ಕುಡಿಯಲು ಕುಳಿತುಕೊಂಡರು. ಆದರೆ ಶೂಷನ್‌ ಪಟ್ಟಣವು ತಳ ಮಳಗೊಂಡಿತು.

ಎಸ್ತೇರಳು 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी